ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಗೆಲುವು ಬೆನ್ನಲ್ಲೇ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ (Syed Azeempeer Khadri) ಕಾಂಗ್ರೆಸ್ ಬಂಪರ್ ಗಿಫ್ಟ್ ನೀಡಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ (HESCOM) ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿಯನ್ನು ಕಾಂಗ್ರೆಸ್ ನೇಮಕ ಮಾಡಿದೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಖಾದ್ರಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಖಾದ್ರಿಗೆ ಉತ್ತಮ ಸ್ಥಾನಮಾನದ ಭರವಸೆ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದರು. ಭರವಸೆ ಬೆನ್ನಲ್ಲೇ ಖಾದ್ರಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್‌ಗೆ ಬೆಂಬಲ ಸೂಚಿಸಿದ್ದರು. ಇದನ್ನೂ ಓದಿ: ಬಣ ಬಡಿದಾಟ ಜೋರು – ಯತ್ನಾಳ್ ಟೀಂ ವಿರುದ್ಧವೇ ಬಿಜೆಪಿಯಿಂದ ಪೊಲೀಸ್ ದೂರು
ಅದರಂತೆಯೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಬೆನ್ನಿಗೆ ನಿಂತು ಗೆಲ್ಲಿಸಿದ್ದರು. ಇದೀಗ ಕೊಟ್ಟ ಮಾತಿನಂತೆಯೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ