Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು

Districts

ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು

Public TV
Last updated: June 8, 2025 2:54 pm
Public TV
Share
2 Min Read
siddaramaiah 11
SHARE

ರಾಯಚೂರು: ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ (Stampede) ಪ್ರಕರಣದ ಹಿನ್ನೆಲೆ ನಾಳೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ನಾಳೆ (ಜೂ.9) ನಗರದ ವಾಲ್‌ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಹಾಗೂ ಮುಂಗಾರು ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಬೇಕಿತ್ತು. ಆದರೆ ಚಿನ್ನಸ್ವಾಮಿಯಲ್ಲಿ (M.Chinnaswamy Stadium) ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆಗಳನ್ನು ಆರಂಭದಲ್ಲೇ ಮೊಟಕುಗೊಳಿಸಲಾಗಿದೆ.ಇದನ್ನೂ ಓದಿ: ಪೊಲೀಸರಿಂದ ಸರ್ಕಾರಕ್ಕೆ ಪತ್ರ – ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡದೇ ತೆರಳಿದ ಡಿಕೆಶಿ

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ (IPL Champions) ಪಟ್ಟವನ್ನೇನೋ ಅಲಂಕರಿಸಿದೆ. ಪಂಜಾಬ್ (PBKS) ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ (ಜೂ.3) ರಾತ್ರಿಯೇ ದೀಪಾವಳಿಯಂತಹ ಸಂಭ್ರಮ ಇತ್ತು. ಬುಧವಾರ (ಜೂ.4) ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

ಅದೇ ದಿನ ದಿಢೀರನೇ RCB ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಅಭಿಮಾನಿ ಸಾಗರವೇ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿಗಳನ್ನು ತಡೆಯಲು ಪೊಲೀಸರು ಹೈರಾಣಾಗಿ ಹೋಗಿದ್ದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ಉಂಟಾಯಿತು. ಒಬ್ಬರ ಮೇಲೋಬ್ಬರು ಬಿದ್ದು, ಉಸಿರಾಟದ ಸಮಸ್ಯೆ ಉಂಟಾಗಿ ಒಟ್ಟು 11 ಜನ ಸಾವನ್ನಪ್ಪಿದ್ದರು.ಇದನ್ನೂ ಓದಿ: ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

TAGGED:Bengaluru StampedeChinnaswamy Stadium Stampedecm siddaramaiahraichururcbಆರ್‍ಸಿಬಿಚಿನ್ನಸ್ವಾಮಿಮುಖ್ಯಮಂತ್ರಿ ಸಿದ್ದರಾಮಯ್ಯರಾಯಚೂರುರಾಯಲ್ ಚಾಲೆಂಜರ್ಸ್ ಬೆಂಗಳೂರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
31 seconds ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
46 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
3 hours ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?