ಬೆಂಗಳೂರು: ಹಾಲು ಒಕ್ಕೂಟಗಳ (Milk Unions) ದರ ಏರಿಕೆಯ (Milk Price) ಒತ್ತಡಕ್ಕೆ ಮಣಿಯದ ಸಿಎಂ ಸಿದ್ದರಾಮಯ್ಯ (Siddaramaiah), ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಹಾಲಿನ ದರ ಹೆಚ್ಚಳದ ಬಗ್ಗೆ ತೀರ್ಮಾನಿಸುವುದಾಗಿ ನಿರ್ಣಯ ಮಾಡಿದ್ದಾರೆ. ಹಾಲು ದರ ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ, ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ, ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ದರ ಏರಿಕೆ… pic.twitter.com/TuVVwKixJd
— Siddaramaiah (@siddaramaiah) March 24, 2025
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂದು ಸಭೆಯಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ.
ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ 2%ಕ್ಕಿಂತ ಹೆಚ್ಚಾಗಬಾರದು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಹಾಲು ಒಕ್ಕೂಟಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಹಕಾರ ಸಚಿವ, ಪಶುಸಂಗೋಪನಾ ಸಚಿವರು ಹಾಜರಿದ್ದರು