ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಮವಾರ ಸಂಜೆ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah Discharge) ಅವರು ನಗರದ ಮಣಿಪಾಲ್ ಆಸ್ಪತ್ರೆ (Manipal Hospital) ಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ತೀವ್ರ ಜ್ವರವಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಗುಣಮುಖರಾಗಿದ್ದು, ಮನೆಗೆ ವಾಪ್ಸಾಗಿದ್ದಾರೆ.
ಜೂನ್ 21ರಂದು ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯನವರು ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಆಸ್ಪತ್ರೆಗೆ ಬಂದು ಪತ್ನಿಯ ಆರೋಗ್ಯ ವಿಚಾರಿಸಿದ್ದರು. ನಂತರ 11.30ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು. ಇದನ್ನೂ ಓದಿ: ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕ್ಕಾಗಲ್ಲ- ಕೆ.ಎನ್.ರಾಜಣ್ಣ ದರ್ಪದ ಮಾತು ವೈರಲ್
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]