ಬಾಗಲಕೋಟೆ: ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಿ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
Advertisement
ಬಾಗಲಕೋಟೆಯಲ್ಲಿ ನಡೆದ 71ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1904ರಲ್ಲಿ ಸಹಕಾರಿ ಕ್ಷೇತ್ರ ಆರಂಭವಾಯಿತು. ಗದುಗಿನ ಕನಗಿಹಾಳದ ಸಿದ್ದನಗೌಡ ಪಾಟೀಲ್ ಸಹಕಾರ ಸಂಘ ಆರಂಭಿಸಿದ್ರು. ಸ್ವಾತಂತ್ರ‍್ಯ ಬಂದ ಮೇಲೆ, ನೆಹರೂ ಅವ್ರು, ಗಾಂಧೀಜಿ ಅವ್ರು ಸಹಕಾರಿ ಕ್ಷೇತ್ರಕ್ಕೆ ಬಹಳ ಒತ್ತು ಕೊಟ್ಟಿದ್ರು. ಪಂಚವಾರ್ಷಿಕ ಯೋಜನೆಯ ಮೂಲಕ ಸಹಕಾರಿ ಕ್ಷೇತ್ರ ಬೆಳೆದಿದೆ. ಹಾಗಾಗಿ ಇಡೀ ದೇಶದಲ್ಲಿ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯವಾಯಿತು ಎಂದು ಸ್ಮರಿಸಿದರು. ಇದನ್ನೂ ಓದಿ: ‘ದಿ ಸಾಬರಮತಿ ರಿಪೋರ್ಟ್’ | ಗೋಧ್ರಾ ದುರಂತದ ಹಿಂದಿನ ಸತ್ಯ ಬಹಿರಂಗ – ಮೋದಿ ಶ್ಲಾಘನೆ
Advertisement
Advertisement
ʻಎಲ್ಲರಿಗೂ ನಾನು, ನನಗಾಗಿ ಎಲ್ಲರೂʼ ಎಂಬ ಸಹಕಾರಿ ಕ್ಷೇತ್ರದ ಧ್ಯೇಯವಾಕ್ಯ. ನಾನು 40-50 ವರ್ಷ ರಾಜಕಾರಣ ಮಾಡಿದ್ರೂ ಸಹ, ಸಹಕಾರಿ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು ಕಡಿಮೆ. ಜೆ.ಟಿ ದೇವೆಗೌಡರಿಗೆ ಸಹಕಾರಿ ಕ್ಷೇತ್ರದಲ್ಲಿ ಏನಾದ್ರೂ ಮಾಡು ಅಂತಾ ಬಿಟ್ಟುಬಿಟ್ಟಿದೆ. ಹೀಗಾಗಿ ಜೆ.ಟಿ ದೇವೆಗೌಡ ಸಹಕಾರಿ ಕ್ಷೇತ್ರದಲ್ಲಿ ಬಹಳ ದೊಡ್ಡದಾಗಿ ಬೆಳೆದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ನನಗೆ ನಂಬಿಕೆ ಇದ್ರೂ ಸಹ, ಅದರಲ್ಲಿ ನಾನು ಹೆಚ್ಚಾಗಿ ತೊಡಗಿಸಿಕೊಂಡಿರಲಿಲ್ಲ. ಸಹಕಾರಿ ಕ್ಷೇತ್ರದಲ್ಲಿ ಪರಸ್ಪರ ನಂಬಿಕೆ ಇರಬೇಕು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: Pushpa 2 The Rule Trailer: ಪುಷ್ಪ ಅಂದ್ರೆ ಫೈಯರ್ ಅಲ್ಲ, ವೈಲ್ಡ್ ಫೈಯರ್ – ಟ್ರೇಲರ್‌ನಲ್ಲಿ ಅಲ್ಲು ಅರ್ಜುನ್ ಖದರ್
Advertisement
ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ. ಅಂದರೆ 3 ಲಕ್ಷ ಲೀಟರ್‌ಗೆ 1 ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ. ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.
ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು ಎಂದು ಕರೆ ನೀಡಿದರು.
2013 ರಲ್ಲಿ 8,165 ಕೋಟಿ ರೂ. ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು. ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ – ಮಂತ್ರಾಲಯದ ಜಾಗ ಆದೊನಿ ನವಾಬರು ಕೊಟ್ಟಿದ್ದು: ಸಿಎಂ ಇಬ್ರಾಹಿಂ