ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ವೋಟ್ ಎಂದಿದ್ದ ಮೈಸೂರು ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಅವರನ್ನು ಆಡಳಿತ ಮಂಡಳಿಯಿಂದಲೇ ವಜಾಗೊಳಿಸಲಾಗಿದೆ.
ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್, ಸಂಘಟನಾ ಕಾರ್ಯದರ್ಶಿ ಟಿ.ಎಸ್. ಲೋಕೇಶ್, ಪದಾಧಿಕಾರಿಗಳಾದ ಸಿ.ಗುರುಸ್ವಾಮಿ, ಹಡಜನ ಚಂದ್ರಶೇಖರ್ ಅವರನ್ನು ಮಹಾಸಭಾದ ಕೇಂದ್ರ ಸಮಿತಿ ಸದಸ್ಯ ಪುಟ್ಟಬುದ್ದಿ ವಜಾಗೊಳಿಸಿದ್ದಾರೆ. ಮೈಸೂರಿನ ಗನ್‍ಹೌಸ್ ವೃತ್ತದ ಬಸವ ಪುತ್ಥಳಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಮಹಾಸಭೆ ತೆಗೆದುಕೊಂಡಿದೆ.
Advertisement
ಕಾಂಗ್ರೆಸ್ ಬೆಂಬಲಿಸಿ ಎಂದು ಮಾತೇ ಮಹಾದೇವಿ ಹೇಳಿದ ಬಳಿಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವೀರಶೈವ-ಲಿಂಗಾಯತರು ಸಿದ್ದರಾಮಯ್ಯರನ್ನು ಬೆಂಬಲಿಸುತ್ತೇವೆ ಎಂದು ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಸಿಎಂ ಸಮ್ಮುಖದಲ್ಲಿ ಪ್ರಮಾಣ ಮಾಡಿದ್ದರು.
Advertisement
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವೀರಶೈವ ಸಂಘಟನೆಗಳು, ಬಸವ ಬಳಗಗಳ ಪರವಾಗಿ ಪ್ರಮಾಣ ಮಾಡುತ್ತಿದ್ದೇನೆ ಎಂದು ಹಿನಕಲ್ ಬಸವರಾಜ್ ಹೇಳಿದ್ದರು. ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು. ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿರುತ್ತದೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತರ ವಿರೋಧಿಯಲ್ಲ ಹಿನಕಲ್ ಬಸವರಾಜ್ ಹೇಳಿದ್ದರು.