ಬೆಂಗಳೂರು: ಕಳೆದ ವಾರ ಬಾಹುಬಲಿ-2 ಚಿತ್ರ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ ಮುಂದಿನ ವಾರ ಮತ್ತೊಂದು ಸಿನಿಮಾ ವೀಕ್ಷಿಸಲಿದ್ದಾರೆ.
ಇಂದು ನಟ ಹಾಗೂ ಮಾಜಿ ಶಾಸಕ ಬಿ.ಸಿ.ಪಾಟೀಲ್ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಹ್ಯಾಪಿ ನ್ಯೂ ಇಯರ್ ಚಿತ್ರ ವೀಕ್ಷಿಸುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಮುಂದಿನ ವಾರ ಚಿತ್ರ ವೀಕ್ಷಿಸೋದಾಗಿ ಸಿಎಂ ಹೇಳಿದ್ದಾರೆ ಅಂದ್ರು.
ಇದನ್ನೂ ಓದಿ: ಬಾಹುಬಲಿ ಸಿನಿಮಾ ವೀಕ್ಷಣೆ: ಕೈ ನಾಯಕನ ವಿರುದ್ಧ ಸಿಎಂ ಗರಂ
ಇದೇ ವೇಳೆ ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಸಿಎಂಗೆ ಮನವಿ ಮಾಡಿರೋದಾಗಿ ಬಿ.ಸಿ.ಪಾಟೀಲ್ ಹೇಳಿದ್ರು. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಆಗಮನದ ಹಿನ್ನೆಲೆಯಲ್ಲಿ, ಮಾಜಿ ಶಾಸಕರಾಗಿ ನಮ್ಮದೂ ಕೂಡಾ ಬೇಡಿಕೆಗಳಿವೆ. ಇಂದು ವೇಣುಗೋಪಾಲ್ ಅವರನ್ನು ಭೇಟಿ ಮಾಡುತ್ತೇನೆ. ಮುಖ್ಯಮಂತ್ರಿ ದಕ್ಷಿಣ ಕರ್ನಾಟಕ ಭಾಗದವರಾಗಿರುವ ಕಾರಣ ಉತ್ತರ ಕರ್ನಾಟಕ ಭಾಗಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ವೇಣುಗೋಪಾಲ್ ಅವರಿಗೆ ಮನವಿ ಮಾಡುತ್ತೇನೆ ಅಂದ್ರು.
ಪನ್ನಗಾಭರಣ ನಿರ್ದೇಶನದಲ್ಲಿ ಮೂಡಿಬಂದಿರೋ ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ಸಾಯಿ ಕುಮಾರ್, ಬಿಸಿ ಪಾಟೀಲ್, ಶೃತಿ ಹರಿಹರನ್, ದಿಗಂತ್, ವಿಜಯ್ ರಾಘವೇಂದ್ರ, ಧನಂಜಯ್, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.