ಚೆನ್ನೈ: ಸಿಜೆಪಿ (CJP), ಎಡಪಂಥೀಯ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಆದೇಶವನ್ನು ತಮಿಳುನಾಡು (Tamil Nadu) ಸರ್ಕಾರ ರದ್ದುಗೊಳಿಸಿದೆ.
ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆಗಳು, ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕ್ರಮ ಕೈಗೊಳ್ಳುವ ತನ್ನ ಹಿಂದಿನ ನಿರ್ದೇಶನವನ್ನು ಸರ್ಕಾರ ಹಿಂತೆಗೆದುಕೊಂಡಿದೆ. ಇದನ್ನೂ ಓದಿ: ಸರ್ಕಾರಿ ಕಾರು, 75,000 ರೂ. ವಾಹನ ಭತ್ಯೆ: ತ.ನಾಡು ಶಾಸಕರಿಗೆ ವಿಜಯ್ ಬಂಪರ್ ಕೊಡುಗೆ
ಈ ವಿಷಯಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ಇಲಾಖೆ ನೀಡಿದ್ದ ಹಿಂದಿನ ನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕಿ ಸಿಂಥಿಯಾ ಸೆಲ್ವಿ ಪಿ ತಿಳಿಸಿದ್ದಾರೆ. ತಮಿಳುನಾಡಿನಾದ್ಯಂತ ಎಲ್ಲಾ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಆದೇಶ ನೀಡಲಾಗಿತ್ತು.
ಎಡಪಕ್ಷಗಳು ಮತ್ತು ತಮಿಳುನಾಡು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸುವ ಪ್ರತಿಭಟನೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸದಂತೆ ನೋಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಈ ಹಿಂದೆ ಶಿಕ್ಷಣ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಇದನ್ನೂ ಓದಿ: ಮಹಿಳಾ ಸರ್ಕಾರಿ ನೌಕರರಿಗೆ ತ.ನಾಡು ಬಂಪರ್ ಗಿಫ್ಟ್; 3ನೇ ಮಗು ಆದ್ರೆ 1 ವರ್ಷ ಮಾತೃತ್ವ ರಜೆ
ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಡಳಿತಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ನೋಡಿಕೊಳ್ಳಲು ತಿಳಿಸಲಾಗಿತ್ತು.

