ಕೊಳ್ಳೇಗಾಲಕ್ಕೆ ಸಿಎಂ ಭೇಟಿ – ಎಸ್. ಜಯಣ್ಣ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಕೆ

Public TV
2 Min Read
S Jayanna CM Siddaramaiah Kollegala

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೊಳ್ಳೇಗಾಲ (Kollegala) ಪಟ್ಟಣಕ್ಕೆ ಇಂದು (ಬುಧವಾರ) ಭೇಟಿ ನೀಡಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ದಿವಂಗತ ಎಸ್. ಜಯಣ್ಣ (S Jayanna) ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ಗೌರವ ಸಲ್ಲಿಸಿದರು.

ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿದ ಸಿಎಂ ಅಲ್ಲಿಂದ ಕಾರಿನಲ್ಲಿ ಪಟ್ಟಣದ ಮಹದೇಶ್ವರ ಕಾಲೇಜು ಬಡಾವಣೆಯಲ್ಲಿರುವ ಎಸ್.ಜಯಣ್ಣ ಅವರ ಅನುಗ್ರಹ ನಿಲಯಕ್ಕೆ ತೆರಳಿ ಅಂತಿಮ ದರ್ಶನ ಪಡೆದರು. ಬಳಿಕ ಎಸ್. ಜಯಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ಪೊಲೀಸ್ ಮಾಹಿತಿದಾರ ಎಂದು ಬಿಜೆಪಿ ನಾಯಕನ ಕೊಂದ ನಕ್ಸಲರು

EX MLA S JAYANNA KOLLEGALA

ಮುಖ್ಯಮಂತ್ರಿಯವರೊಂದಿಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಲೋಕಸಭಾ ಸದಸ್ಯರಾದ ಸುನಿಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿ ಪುಟ್ಟರಂಗಶೆಟ್ಟಿ, ಹೆಚ್.ಎಂ. ಗಣೇಶ್ ಪ್ರಸಾದ್, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಆರ್. ಮಂಜುನಾಥ್, ದರ್ಶನ್ ಧ್ರುವನಾರಾಯಣ, ಡಾ. ಡಿ. ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರ್‌ನಾಥ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಇನ್ನಿತರ ಗಣ್ಯರು ಎಸ್. ಜಯಣ್ಣ ಅವರಿಗೆ ಅಂತಿಮ ಗೌರವ ನಮನ ಸಲ್ಲಿಸಿದರು. ಇದನ್ನೂ ಓದಿ: ಕಾರು, ಬೈಕ್ ನಡುವೆ ಭೀಕರ ಅಪಘಾತ – ಸವಾರ ಸಾವು, ಇಬ್ಬರಿಗೆ ಗಾಯ

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಯಣ್ಣ ಅವರು ವಿದ್ಯಾರ್ಥಿ ದೆಸೆಯಿಂದಲೂ ನನ್ನ ಜೊತೆಗೆ ಆತ್ಮೀಯವಾದ ಸಂಬಂಧ ಹೊಂದಿದ್ದರು. ಶಾಸಕರಾದ ಮೇಲೆ ಮತ್ತಷ್ಟು ಹತ್ತಿರವಾದರು. ನಾನು ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ಧರಾಗಿರುತ್ತಿದ್ದರು. ರಾಜಕೀಯದಲ್ಲಿ ಬಹಳ ಅಪರೂಪದ ವ್ಯಕ್ತಿ ಹಾಗೂ ಸೌಮ್ಯ ಸ್ವಭಾವದವರಾಗಿದ್ದರು ಎಂದರು. ಇದನ್ನೂ ಓದಿ: ಉಡುಪಿ| ಸ್ಟಾರ್‌ ಹೋಟೆಲ್‌ಗಳಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ವೃದ್ಧ ಸೆರೆ

ಜಯಣ್ಣ ಅವರು ಸಿದ್ಧಾಂತದ ಮೇಲೆ ನಂಬಿಕೆ ಇಟ್ಟವರಾಗಿದ್ದರು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗುತ್ತಿರಲಿಲ್ಲ. ಅವರು ನಂಬಿದ್ದ ಸಿದ್ಧಾಂತಗಳಲ್ಲಿ ಬದಲಾವಣೆ ಮಾಡುತ್ತಿರಲಿಲ್ಲ. ಅಜಾತಶತ್ರುವಾಗಿದ್ದ ಜಯಣ್ಣನವರು ಎಲ್ಲರನ್ನೂ ಪ್ರೀತಿಸುತ್ತಿದ್ದರು. ಎಂದೂ ದ್ವೇಷ ಮಾಡುತ್ತಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ರೈಲ್ವೇ ತಿದ್ದುಪಡಿ ಮಸೂದೆ 2024 ಅಂಗೀಕಾರ

Share This Article