ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದರು. ಇದನ್ನೂ ಓದಿ : ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗೂಸಾ ಕೊಟ್ಟ ಗ್ರಾಮಸ್ಥರು
ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಹೇಳಿದರು.
ಇದೇ ವೇಖೆ ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ : ತಿಂಗಳ ಮುತ್ತು: ರಣಬೀರ್ ಕಪೂರ್, ಆಲಿಯಾ ಭಟ್ ಕಿಸ್ಮತ್