ಸಿಎಂ ಬಜೆಟ್‍ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ನೀಡ್ತಾರೆ: ಸುಧಾಕರ್

Public TV
1 Min Read
CKB 1 2

ಚಿಕ್ಕಬಳ್ಳಾಪುರ: ಬಜೆಟ್‍ನಲ್ಲಿ ರೈತರಿಗೆ ಈ ಬಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಪರ್ ಗಿಫ್ಟ್ ಕೊಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಕೃಷಿಮೇಳ 2020ರ ಸಿರಿಧಾನ್ಯಮೇಳ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ಇತೆರೆ ಕ್ಷೇತ್ರಗಳ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರು ಆಗಮಿಸದ ಹಿನ್ನೆಲೆಯಲ್ಲಿ ಬಹಿರಂಗವಾಗಿ ಅಸಮಧಾನ ಹೊರಹಾಕಿದರು.

ckb sudhakar

ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ, ಗೌರಿಬಿದನೂರು ಶಾಸಕರು ಆಗಮಿಸಿಲ್ಲ. ಇದು ಕೇವಲ ಚಿಕ್ಕಬಳ್ಳಾಪುರ ಕ್ಷೇತ್ರದ ಕಾರ್ಯಕ್ರಮ ಮಾತ್ರ ಅಲ್ಲ. ಇಡೀ ಜಿಲ್ಲೆಗೆ ಸಂಬಂಧಿಸಿದ ಕಾರ್ಯಕ್ರಮ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲೂ ಸಹ ರೈತರು ಆಗಮಿಸಿದ್ದಾರೆ. ಆದರೆ ಯಾವ ಶಾಸಕರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದರು.

ಸ್ವಾರ್ಥ ರಾಜಕಾರಣವನ್ನ ಬಿಟ್ಟು ಅಭಿವೃದ್ದಿಗೆ ಕೈ ಜೋಡಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಇನ್ನೂ ಮುಂದಾದ್ರು ರಾಜಕಾರಣಿಗಳ ಮನಸ್ಸು ಪರಿವರ್ತನೆ ಆಗಲಿ ಎಂದು ಅಸಮಾಧಾನ ಹೊರಹಾಕಿದರು.

cm 1

ಇದೇ ವೇಳೆ ಮಾತನಾಡಿ, ಬಜೆಟ್‍ನಲ್ಲಿ ರೈತರಿಗೆ ಸಿಎಂ ಯಡಿಯೂರಪ್ಪ ಈ ಬಾರಿ ಬಂಪರ್ ಗಿಫ್ಟ್ ಕೊಡಲಿದ್ದಾರೆ. ವಿವಿಧ ಭಾಗ್ಯಗಳನ್ನ ರೈತರಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *