– ಸಿಎಂ ಬಿಎಸ್‍ವೈ ಆದೇಶ
ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಯಡಿಯೂರಪ್ಪ ಅವರು ಶ್ರಾವಣದ ಸಿಹಿ ಸುದ್ದಿ ಘೋಷಿಸಿದ್ದಾರೆ.
ಶುಕ್ರವಾರ ನಡೆದ ಡಿಸಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್‍ವೈ ಅವರು, ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6 ಸಾವಿರದ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದಲೂ 4 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ ಒಟ್ಟು 31 ಲಕ್ಷ ರೈತರಿಗೆ ಪರಿಹಾರ ಸಿಗಲಿದೆ ಎಂದಿದ್ದಾರೆ.
Advertisement
ಮೊದಲ ಕಂತಿನ ಹಣವಾಗಿ 2 ಸಾವಿರ ರೂಪಾಯಿಯನ್ನು 15 ರಿಂದ 20 ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಸೂಚನೆ ಕೊಟ್ಟಿದ್ದಾರೆ.
Advertisement
Advertisement
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಜಾರಿ ಮಾಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗಾಗಿ ರಾಜ್ಯ ಸರ್ಕಾರದಿಂದ 4 ಸಾವಿರ ನೀಡುವುದಾಗಿ ಫೋಷಿಸಿದ್ದರು.
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಕ್‍ಪುರ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದರು.
ಏನಿದು ಯೋಜನೆ?:
ಈ ಬಾರಿಯ ಬಜೆಟಿನಲ್ಲಿ ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.
ಅರ್ಹತೆಗಳು ಏನು?
2 ಹೆಕ್ಟೇರ್(4.94 ಎಕ್ರೆ) ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿಯನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭವನ್ನು ಪಡೆಯಬಹುದು. 2019 ಫೆ.1ರ ಒಳಗಡೆ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಭೂ ದಾಖಲೆಗಳಲ್ಲಿ ನೊಂದಣಿಯಾದ ರೈತರು ಈ ಯೋಜನೆಗೆ ಅರ್ಹರಾಗುತ್ತಾರೆ. ಸರ್ಕಾರಿ ಉದ್ಯೋಗಿಗಳ ಪೈಕಿ ಗ್ರೂಪ್ ಡಿ/ ಬಹು ಕಾರ್ಯ ನಿರ್ವಹಿಸುವ ಸರ್ಕಾರಿ ನೌಕಕರು/ ನಾಲ್ಕನೇಯ ವರ್ಗದ ಸಿಬ್ಬಂದಿ ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.