– ದಾವೋಸ್‍ನಿಂದ ಬಿಎಸ್‍ವೈ ವಾಪಸ್
ಬೆಂಗಳೂರು: ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸ್ವಿಟ್ಜರ್ಲೆಂಡ್‍ನ ದಾವೋಸ್‍ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ವಾರ್ಷಿಕ ಶೃಂಗಸಭೆಯಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬಹಳ ಆಸಕ್ತಿ ತೋರಿಸಿವೆ. ದಾವೋಸ್ ಪ್ರವಾಸ ಸಾಕಷ್ಟು ಲಾಭ ತಂದಿದೆ ಎಂದು ತಿಳಿಸಿದರು.
Advertisement
Advertisement
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕೇವಲ ಮೂರ್ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರೊಂದಿಗೆ ನಾಳೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದರೆ ನಾಳೆಯೂ ಅಮಿತ್ ಶಾ ಅವರ ಜೊತೆ ಮಾತನಾಡಲು ಸಮಯ ಸಿಕ್ಕಿದ್ದು ಅವರ ಜೊತೆ ಚರ್ಚೆ ನಡೆಸಿ ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು.
Advertisement
ಕೇವಲ ಏಳು ಮಂದಿಗೆ ಸಚಿವ ಸ್ಥಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅದೆಲ್ಲ ಸುಳ್ಳು ಎಂದರು. ಆದರೆ ಸೋತವರಿಗೆ ಸಚಿವ ಸ್ಥಾನವನ್ನು ನೀಡುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗ ನಾನು ಗೆದ್ದವರ ಬಗ್ಗೆ ಮಾತನಾಡಿದ್ದೇನೆ ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆ ಈಗ ಉದ್ಭವಿಸುವುದಿಲ್ಲ ಎಂದು ಜಾರಿಕೊಂಡರು.