– 20 ಸಾವಿರ ಕಲಾವಿದರು, ತಂತ್ರಜ್ಞರು ಇದರ ಮೇಲೆ ಅವಲಂಬಿತ
– ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರಿಗೆ ನಟಿ ತಾರಾ ಸಾಥ್
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಲಾಡ್‍ಡೌನ್ ಸಡಿಲ ಆಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿ ಅನುಮತಿ ಕೊಡುವಂತೆ ಸಿಎಂ ಯಡಿಯೂರಪ್ಪ ಬಳಿ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಮೇ 11ರಿಂದ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅನುವು ಮಾಡಿಕೊಂಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ. ಕೊರೊನಾದಿಂದ ಮಾರ್ಚ್ 19 ರಿಂದ ಕಿರುತೆರೆಯ ಶೂಟಿಂಗ್‍ಗೆ ಬ್ರೇಕ್ ಹಾಕಿತ್ತು. ಹೀಗಾಗಿ ಮತ್ತೆ ರಾಜ್ಯ ಸರ್ಕಾರದ ವತಿಯಿಂದ ಶೂಟಿಂಗ್ ಪ್ರಾರಂಭಿಸಲು ಅನುಮತಿ ಕೊಡಿ ಎಂದು ಎಸ್.ವಿ.ಶಿವಕುಮಾರ್ ಸಿಎಂ ಯಡಿಯೂರಪ್ಪ ಮುಂದೆ ಬೇಡಿಕೆ ಇಟ್ಟಿದ್ದಾರೆ.
Advertisement
Advertisement
ಮೇ 4 ರಂದು ರಾಜ್ಯದಲ್ಲಿ ಗ್ರೀನ್ ಮತ್ತು ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್ ಸಡಿಲಿಕೆ ಆಗುತ್ತಿದೆ. ಇದೇ ನಿಟ್ಟಿನಲ್ಲಿ ನಮ್ಮ ಕ್ಷೇತ್ರಕ್ಕೂ ಸಡಿಲಿಕೆ ಮಾಡಿ. ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಿದರೆ ಒಳ್ಳೆಯದಾಗುತ್ತೆ. ಅಂದಾಜು 120 ಧಾರಾವಾಹಿಗಳ ಶೂಟಿಂಗ್ ನಡೆಯುತ್ತಿದ್ದು, 20 ಸಾವಿರ ಕಲಾವಿದರು, ತಂತ್ರಜ್ಞರು ಇದರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ನಮ್ಮ ಕ್ಷೇತ್ರಕ್ಕೆ ಅನುಮತಿ ಅವಶ್ಯಕತೆ ಇದೆ ಎಂದು ಮನವಿ ಮಾಡಿದ್ದಾರೆ.
Advertisement
ಒಂದು ವೇಳೆ ಅನುಮತಿ ನೀಡಿದರೆ ಎಷ್ಟೋ ಕುಟುಂಬಗಳು ನಿರಾಳವಾಗಿ ಜೀವನ ಸಾಗಿಸಲು ಅನುಕೂಲವಾಗಲಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಚಿತ್ರೀಕರಣ ಮಾಡುತ್ತೇವೆ. ಅಲ್ಲದೇ ಶೂಟಿಂಗ್ ಲೋಕೇಷನ್‍ಗಳಲ್ಲಿ 20ಕ್ಕಿಂತ ಅಧಿಕ ತಂತ್ರಜ್ಞರು, ಕಲಾವಿದರು ಸೇರದಾಗೆ ಎಚ್ಚರಿಕೆ ವಹಿಸುತ್ತೇವೆ ಎಂದು ಶಿವಕುಮಾರ್ ಭರವಸೆ ನೀಡಿದರು.
Advertisement
ಎಸ್.ವಿ.ಶಿವಕುಮಾರ್ ಮನವಿಗೆ ಎರಡ್ಮೂರು ದಿನಗಳಲ್ಲಿ ಸಭೆ ನಡೆಸಿ ತಿಳಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ವೇಳೆ ನಟಿ ಎಸ್.ವಿ ಶಿವಕುಮಾರ್ ಅವರಿಗೆ ನಟಿ ತಾರಾ ಅನುರಾಧಾ ಕೂಡ ಕಲಾವಿದರ ಪರ ನಿಂತು ಸಾಥ್ ನೀಡಿದರು.