– ಮಾರ್ಚ್ 31ರವರೆಗೂ ಕೊರೊನಾ ಎಮೆರ್ಜೆನ್ಸಿ ಮುಂದುವರಿಯುತ್ತೆ
ಬೆಂಗಳೂರು: ಕೊರೊನಾ ವೈರಸ್ ಭಯದಿಂದ ಈಗಾಗಲೇ ರಾಜ್ಯಾದ್ಯಂತ ಬಂದ್ ಮಾಡಲಾಗಿದ್ದು, ಶಾಲಾ -ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಸಾಕಷ್ಟು ಗೊಂದಲ ಇತ್ತು. ಇದೀಗ ಸ್ವತಃ ಸಿಎಂ ಯಡಿಯೂರಪ್ಪ ಅವರೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಕೊರೊನಾ ತಡೆ ಸಂಬಂಧ ಪ್ರಧಾನಿ ಮೋದಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಮೊದಲು ಮಹಾರಾಷ್ಟ್ರ ಸಿಎಂ, ಕೇರಳ ಮುಖ್ಯಮಂತ್ರಿಯಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ, ಮೂರನೆಯದಾಗಿ ಕರ್ನಾಟಕ ಸಿಎಂ ಯಡಿಯೂರಪ್ಪರನ್ನು ಮಾತನಾಡಿಸಿದರು. ಈ ವೇಳೆ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಮಂಗಳೂರಿಗೆ ಕೊರೊನಾ ಲ್ಯಾಬ್ ಬೇಕು ಅಂತ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ. ಮೋದಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.
Advertisement
Advertisement
ನಂತರ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ, ಕೊರೊನಾ ವಿಚಾರವಾಗಿ ನಾವು ದೇಶದಲ್ಲೇ ಮೊದಲು ಮುಂಜಾಗ್ರತಾ ಕ್ರಮ ಕೈಗೊಂಡ್ವಿ. ಮಾರ್ಚ್ 31ರವರೆಗೂ ರಾಜ್ಯದಲ್ಲಿ ಕೊರೊನಾ ಎಮೆರ್ಜೆನ್ಸಿ ಮುಂದುವರಿಯುತ್ತೆ. ಯಾವುದೇ ಕಾರಣಕ್ಕೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಲ್ಲ. ನಿಗದಿತ ವೇಳಾಪಟ್ಟಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದರು.
Advertisement
ಮಾರ್ಚ್ 27 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಅದೇ ದಿನದಿಂದ ಪರೀಕ್ಷೆ ಆರಂಭವಾಗಲಿದೆ.