ನವದೆಹಲಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಹೈಕಮಾಂಡ್ ಬುಲಾವ್ ಮೇರೆಗೆ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 11-45 ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು ಮಧ್ಯಾಹ್ನ 2-40ಕ್ಕೆ ದೆಹಲಿ ತಲುಪಲಿದ್ದಾರೆ.
ದೆಹಲಿ ತಲುಪಲು ಮುನ್ನವೇ ಸಿಎಂ ಯಡಿಯೂರಪ್ಪಗೆ ಶಾಕಿಂಗ್ ನ್ಯೂಸ್ ಕಾದಿದ್ದು ಇಂದು ಹೈಕಮಾಂಡ್ ಭೇಟಿಗೆ ಅವಕಾಶ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ರಾತ್ರಿ ಒಂಬತ್ತು ಗಂಟೆಗೆವರೆಗೂ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ.
Advertisement
Advertisement
ಮಧ್ಯಾಹ್ನ ಮೂರು ಗಂಟೆಯಿಂದ ಚುನಾವಣಾ ಸಮಾವೇಶಗಳಲ್ಲಿ ಭಾಗಿಯಾಗಲಿರುವ ಗೃಹ ಸಚಿವ ಅಮಿತ್ ಶಾ, 3:30 ರಿಂದ ರಾತ್ರಿ 8:30 ವರೆಗೂ ನಾಲ್ಕು ಕಡೆ ಪ್ರಚಾರ ಮತ್ತು ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಯಿಂದ ರಾತ್ರಿ 7:30ವರೆಗೂ ಜೆ.ಪಿ ನಡ್ಡಾ ಮೂರು ಕಡೆ ಪ್ರತ್ಯೇಕ ಪ್ರಚಾರ ಮಾಡಲಿದ್ದು ಬಹಿರಂಗ ರ‍್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.
Advertisement
Advertisement
ಹೀಗಾಗಿ ಹೈಕಮಾಂಡ್ ಬಹುತೇಕ ರಾತ್ರಿ ಒಂಬತ್ತು ಗಂಟೆಯವರೆಗೂ ಚುನಾವಣಾ ಕಾರ್ಯಗಳಲ್ಲಿ ನಿರತವಾಗಿರುವುದರಿಂದ ಇಂದು ಭೇಟಿ ಅನುಮಾನ ಎನ್ನಲಾಗುತ್ತಿದೆ. ಹೈಕಮಾಂಡ್ ಮನಸ್ಸು ಮಾಡದಲ್ಲಿ ರಾತ್ರಿ ಹತ್ತು ಗಂಟೆಯ ಬಳಿಕ ಮಾತುಕತೆ ನಡೆಸಬಹುದು ಆದರೆ ಈ ಸಾಧ್ಯತೆ ವಿರಳ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಹೀಗಾಗಿ ಸಂಪುಟ ವಿಸ್ತರಣೆ ಮಾತುಕತೆ ಇಂದೇ ಫೈನಲ್ ಆಗುತ್ತಾ ಅಥವಾ ನಾಳೆ ಮುಂದೂಡುತ್ತಾ ಅನ್ನೋ ಕುತೂಹಲ ಮೂಡಿಸಿದೆ.