ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅತ್ತ ಸಿಎಂ ಸಹ ರಾಜಧಾನಿಯ ತಮ್ಮ ಸ್ವಗೃಹದಲ್ಲಿ ವಿಶೇಷ ಪೂಜೆ-ಹೋಮ ಹವನಗಳಲ್ಲಿ ತೊಡಗಿದ್ದರು. ಆದರೆ ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿದ್ದಾರೆ.
ರೋಗಿಗಳಿಗೆ ಹಣ್ಣು-ಹಂಪಲು ದಾನ ಹಾಗೂ ಬಡವರಿಗಾಗಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲುವ ಮೂಲಕ ವಿಶಿಷ್ಟವಾಗಿ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 78 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ನಿಜಲಿಂಗಪ್ಪ ಸಭಾಂಗಣದ ಈಶ್ವರನ ದೇವಾಲಯದಲ್ಲಿ ವಿಶೇಷ ಹೋಮ-ಹವನ ಪೂಜೆ ನೆರವೇರಿಸಲಾಯಿತು. ನಂತರ ಬಡವರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೂಡ ಹಮ್ಮಿಕೊಳ್ಳಲಾಗಿತ್ತು.
Advertisement
Advertisement
ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡರು. ಅಲ್ಲದೆ ಸ್ವತಃ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಆರೋಗ್ಯ ಶಿಬಿರ ಮತ್ತು ಹೋಮ-ಹವನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇದಕ್ಕೂ ಮುನ್ನ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಒಳರೋಗಿಗಳಿಗೆ, ಹಣ್ಣು-ಹಂಪಲು ಮತ್ತು ಬ್ರೆಡ್ ವಿತರಿಸಲಾಯಿತು.
Advertisement
ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಮತ್ತು ಶಾಸಕರಾದ ರುದ್ರೇಗೌಡ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.