ಬಾಗಲಕೋಟೆ: ಇಂದು ಬಾಗಲಕೋಟೆ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬರ ಮಾಡಿಕೊಳ್ಳಲು ಹೊರಟಿದ್ದ ಬಾಗಲಕೋಟೆ ಜಿಲ್ಲಾ ಪೊಲೀಸ್ ಬೆಂಗಾವಲು ವಾಹನ ಪಲ್ಟಿ ಆಗಿದೆ.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಸೈದಾಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಎದುರು ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೆಂಗಾವಲು ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದೆ.
Advertisement
Advertisement
ಈ ಅಪಘಾತದಲ್ಲಿ ಇಳಕಲ್ ಪಿಎಸ್‍ಐ ಕುಮಾರ ಹಾಡಕರ್, ಹವಾಲ್ದಾರ್ ಮಂಜುನಾಥ ರಾಥೋಡ್ ಹಾಗೂ ವಾಹನ ಚಾಲಕ ಶಿವಾನಂದ ಕಟ್ಟಿಮನಿಗೆ ಗಾಯಗೊಂಡಿದ್ದಾರೆ. ಸದ್ಯ ಮೂವರಿಗೆ ಮಹಲಿಂಗಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.