ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮಂಜುನಾಥ್ ಸಹ್ಯಾದ್ರಿ ಮೃತಪಟ್ಟ ಪತ್ರಕರ್ತ. ಪತ್ರಿಕೆಯ ಹಾವೇರಿ ಜಿಲ್ಲಾ ವರದಿಗಾರರಾಗಿದ್ದ ಮಂಜುನಾಥ್, ಬುಧುವಾರ ಸಂಜೆ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಹೊಳಲ್ಕೆರೆಯಲ್ಲಿರುವ ತನ್ನ ಸಹೋದರಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಬಿ ರಸ್ತೆಯ ಕೊಡಗನೂರು ಬಳಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
Advertisement
ಅಪಘಾತ ನಡೆದ ನಂತರ ಚಾಲಕ ತನ್ನ ಟ್ರ್ಯಾಕ್ಟರ್ ಸಮೇತ ಪರಾರಿಯಾಗಿದ್ದಾನೆ. ಅಪಘಾತದ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೊಲೀಸರು ಮಂಜುನಾಥ್ ಮೃತದೇಹವನ್ನು ಟಾಟಾ ಏಸ್‍ನಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
Advertisement
ಮೃತದೇಹವನ್ನು ಟಾಟಾ ಏಸ್‍ನಲ್ಲಿ ಸಾಗಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಮಂಜುನಾಥ್ ಅವರ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿತ್ತು. ಇಂದು ಶಿವಮೊಗ್ಗದಲ್ಲಿ ಮಂಜುನಾಥ್ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.
Advertisement
ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿರುವ ಮಂಜುನಾಥ್ ಪತ್ರಿಕೆಯಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಬೆಂಗಳೂರಿನಿಂದ ವರ್ಗಾವಣೆಯಾಗಿ ಹಾವೇರಿಗೆ ತೆರಳಿದ್ದರು. ಮಂಜುನಾಥ್ ತಮ್ಮ ಪೋಷಕರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.