ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯ್ತು.
ಸಿಎಂ ಯೋಗಿ ಅವರು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ. ಯೋಗಿ ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ್ದು, ಕಾರ್ಯಕ್ರಮದ ಬಳಿಕ ನಾಳೆ ರಾತ್ರಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ನಿರ್ಗಮಿಸಲಿದ್ದಾರೆ.
ಜನರಕ್ಷಾ ಯಾತ್ರೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಈ ಯಾತ್ರೆ 15 ದಿನಗಳ ಕಾಲ ನಡೆಯಲಿದ್ದು, ಅ.17 ರಂದು ತಿರುವನಂತಪುರಂನಲ್ಲಿ ಕೊನೆಗೊಳ್ಳಲಿದೆ. ಪ್ರತಿದಿನವೂ ದೇಶದಾದ್ಯಂತದ ಯುವಮೋರ್ಚಾ ಕಾರ್ಯಕರ್ತರು, ಬಿಜೆಪಿ ಆಡಳಿತವುಳ್ಳ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.