Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

Bengaluru City

ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

Public TV
Last updated: July 21, 2024 3:13 pm
Public TV
Share
5 Min Read
BASAVBARAJ BOMMAI
SHARE

– ಕೇಂದ್ರ ಬಜೆಟ್‌ನಲ್ಲಿ ರಸ್ತೆ, ರೈಲ್ವೆ, ಕೃಷಿ ವಲಯಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ ಎಂದ ಸಂಸದ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki corporation scam) ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ರಕ್ಷಣೆಗೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ತಯಾರಿದ್ದೇವೆ. ಆದರೆ, ರಾಜಕೀಯ ದ್ವೇಷಕ್ಕಾಗಿ ಅಧಿಕಾರ ದುರುಪಯೋಗ ಆಗಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಹಣ ಚುನಾವಣಾ ರಾಜಕಾರಣಕ್ಕೆ, ಮದ್ಯ ಖರೀದಿಗೆ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿಯ ಅವಧಿಯಲ್ಲಿ 21 ಹಗರಣ ಆಗಿದೆ ಎಂದು ಆರೋಪಿಸಿದ್ದಾರೆ. ಬಹಳ ಕಷ್ಟ ಪಟ್ಟು ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಈಗ ಕಣ್ಣು ತೆರೆದು ನೋಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾರೆ. ಯಾವುದೇ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ಧರಿದ್ದೇವೆ. ಆದರೆ, ತನಿಖೆ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗಬಾರದು, ಅವರು ಮಾಡಿರುವ ಆರೋಪಕ್ಕೆ ದಾಖಲೆ ನೀಡಬೇಕಿತ್ತು ಎಂದು ಆಗ್ರಹಿಸಿದರು.

Siddaramaiah 1 1

ನನ್ನ ವಿರುದ್ಧ ಮಾಡಿರುವ ಆರೋಪದಲ್ಲಿ ನಾ‌ನು ಎಪಿಎಂಸಿ ಸಚಿವನಾಗಿರಲಿಲ್ಲ, ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ‌. ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ, ಅದರ ತನಿಖೆ ನಡೆಯುತ್ತಿದೆ. ಗಂಗಾ ಕಲ್ಯಾಣ ಯೋಜನೆ ದುರುಪಯೋಗದ ಆರೋಪ ಕೇಳಿ ಬಂದಾಗ ನಾನೇ ಸದನದಲ್ಲಿ ಸಿಐಡಿ ತನಿಖೆಗೆ ನೀಡಿದ್ದೇನೆ. ಅದರ ತನಿಖೆ ಕೊನೆ ಹಂತಕ್ಕೆ ಬಂದಿದೆ. ನಮ್ಮ ವಿರುದ್ದ 40% ಆರೊಪವನ್ನು ಮಾಡಿದ್ದರು. ಇದುವರೆಗೂ ಯಾವುದೇ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ನೋಟಿಸ್ ಕೊಟ್ಟಿಲ್ಲ. ರಾಜಕೀಯ ಉದ್ಯೇಶದಿಂದ ಆಯೊಗ ಮಾಡಿದರೆ, ತನಿಖೆ ನಡೆಸಿದರೆ ಹೀಗೆ ಆಗುವುದು ಎಂದು ತಿರುಗೇಟು ನೀಡಿದರು.

ಎಲ್ಲಾ ಹಗರಣ ಹೊರ ಬರುತ್ತಿವೆ
ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ ಎಲ್ಲಾ ಇಲಾಖೆಗಳಲ್ಲಿ ಹಗರಣ ಹೊರ ಬರುತ್ತಿವೆ‌ ಕೊಮುಲ್‌ನಿಂದ‌ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ‌. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಎನ್ನುವಂತಾಗಿದೆ. ಸ್ವಾತಂತ್ರ್ಯ ನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್. ಅವರು ಯಾವುದೇ ತನಿಖೆ ನಡೆಸಲಿ ನಾವು ಎದುರಿಸುತ್ತೇವೆ. ನಾವು ಅವರ ರೀತಿ ಇಡಿ ಯಾಕೆ, ಸಿಬಿಐ ಯಾಕೆ ಬಂತು ಎಂದು ಕೇಳುವುದಿಲ್ಲ. ನಾವು ಅವರ ಹಾಗೆ ಅಂಜುಬುರುಕರಲ್ಲ. ಪೊಲೀಸ್ ಇಲಾಖೆಯನ್ನು ತಮ್ಮ ವಿರುದ್ಧ ಬಂದಿರುವ ಆರೋಪದಿಂದ ರಕ್ಷಣೆ ಪಡೆಯಲು ದುರ್ಬಳಕೆ ಮಾಡಿಕೊಂಡರೆ ಆ ಹಗರಣವೂ ಶೀಘ್ರವೇ ಹೊರ ಬರಲಿದೆ ಎಂದು ಅವರು ಎಚ್ಚರಿಸಿದರು.

ಇಡಿ ತನಿಖೆ ಬಗ್ಗೆ ಇವರಿಗೆ ಯಾಕೆ ಭಯ?
ಈಗಾಗಲೇ ಇವರ ವಿರುದ್ಧ ಸುಮಾರು 40 ಕ್ಕಿಂತ ಹೆಚ್ಚು ಪ್ರಕರಣಗಳು ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಬಿಬಿಎಂಪಿಯಲ್ಲಿ ಗುತ್ತಿಗೆದಾರಿಗೆ 68% ರಷ್ಟು ಹೆಚ್ಚಿಗೆ ನೀಡಿದ್ದಾರೆ. ಇವೆಲ್ಲವೂ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಯವರು ಶುಕ್ರವಾರ ಅಧಿವೇಶನ ಕೊನೆ ಗಳಿಗೆಯಲ್ಲಿ ಆರೋಪ ಮಾಡಿ ವಿರೋಧ ಪಕ್ಷದವರು ಬಾಯಿ‌ಮುಚ್ಚಿಕೊಂಡಿದ್ದಾರೆ ಎನ್ನುತ್ತಾರೆ‌. ನಾವು ಬಾಯಿ ಮುಚ್ಚಿಕೊಂಡು ಕುಳಿತಿಲ್ಲ. ಸದನದಲ್ಲಿ ಪ್ರತಿಪಕ್ಷದ ಶಾಸಕರನ್ನು ಟಾರ್ಗೆಟ್ ಮಾಡಿದರೂ ಯಾರೂ ಬಗ್ಗುವುದಿಲ್ಲ. ಅವರ ಮುಖಕ್ಕೆ ಮಸಿ ಬಳಿದಿದೆ. ಅದಕ್ಕೆ ಎಲ್ಲರೂ ಒಂದು ಎಂದು ತೋರಿಸಲು ಹೊರಟಿದ್ದಾರೆ. ಭ್ರಷ್ಟಾಚಾರದ ಬ್ರಹ್ಮ ಯಾರು ಎಂದು ಎಲ್ಲರಿಗೂ ಗೊತ್ತಾಗಿದೆ. ಅವರು ಈಗ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ತನಿಖೆ ನಂತರ ಸತ್ಯ ಹೊರಬರಲಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ದದ ಹೋರಾಟ ಸದನದ ಹೊರಗೆ ಹಾಗೂ ಒಳಗೆ ಮುಂದುವರೆಯಲಿದೆ ಎಂದು ಹೇಳಿದರು.

ನೆರೆ ನಿರ್ಲಕ್ಷ್ಯ:
ಇದೇ ವೇಳೆ, ರಾಜ್ಯದಲ್ಲಿ ಪ್ರವಾಹ ಬಂದರೂ ಮುಖ್ಯಮಂತ್ರಿ ಹಾಗೂ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದಿರುವ ಬಗ್ಗೆ, ಬರ ಮತ್ತು ಪ್ರವಾಹದ ವಿಚಾರದಲ್ಲಿ ಈ ಸರ್ಕಾರ ನಿರ್ಲಕ್ಷ್ಯ ಮಾಡಿರುವುದು ಸ್ಪಷ್ಟವಾಗಿದೆ. ನಮ್ಮ ಕೇಂದ್ರ ಸಚಿವರು, ಪಕ್ಷದ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ನಂತರ ಸಿಎಂ ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ 700 ಕೋಟಿ ರೂ. ನೀಡಿದೆ. ಇವರು ರಾಜ್ಯ ಸರ್ಕಾರದಿಂದ ಬರ ಬಂದಾಗಲೂ ಹಣ ಬಿಡುಗಡೆ ಮಾಡಲಿಲ್ಲ. ಈಗಲೂ ಬಿಡುಗಡೆ ಮಾಡಿಲ್ಲ. ಈ ಸರ್ಕಾರಕ್ಕೆ ಒಳ್ಳೆಯ ಆಡಳಿತ ಕೊಡುವ ಉದ್ದೇಶ ಇಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾವಾಗಲೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಾರೆ ಎಂದು ಆರೋಪಿಸಿದರು.

ರಾಜಕೀಯ ಬೆಳವಣಿಗೆಗೆ ನಾಂದಿ
ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರ ಪರಿಸ್ಥಿತಿ ಏನಾಗಿದೆ ಎಂದರೆ, ಕ್ಷೇತ್ರಕ್ಕೆ ಅನುದಾನ, ಅಭಿವೃದ್ಧಿ ಇಲ್ಲದೇ ಜನರ ಸಮಸ್ಯೆ ಕೇಳಲು ಆಗುತ್ತಿಲ್ಲ. ಅತ್ತ ಸಚಿವರ ಬಳಿ ಹೋದರೆ ಶಾಸಕರ ಕಷ್ಟ ಕೇಳುತ್ತಿಲ್ಲ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೇಳಿದ್ದಾರೆ. ಇವರ ಅಸಮಾಧಾನ ಮುಂದಿನ‌ ರಾಜಕೀಯ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದರು.

ಇಡಿ ಬಗ್ಗೆ ಭಯ ಏಕೆ?
ರಾಜ್ಯ ಸರ್ಕಾರ ಇಡಿ ವಿರುದ್ಧ ಕಾನೂನು ಸಮರಕ್ಕೆ ಚಿಂತನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೆಯೂ ಅವರು ಇಡಿ ವಿರುದ್ಧ ದೂರು ಕೊಡುವ ಕೆಲಸ ಮಾಡಿದ್ದರು. ಇವರಿಗೆ ಯಾರ ಭಯ? ಯಾಕೆ ಭಯ? ಯಾರ ಹೆಸರು ಹೊರಗೆ ಬರುತ್ತದೆ ಎಂದು ಭಯ ಇವರಿಗೆ? ಹಗರಣಗಳನ್ನು ಮಾಡಿದ ಎಲ್ಲಾ ರಾಜಕಾರಣಿಗಳ ಸಾಮಾನ್ಯ ನಡೆ ಇದು. ಕುಂಬಳಕಾಯಿ ಕಳ್ಳ ಎಂದರೆ, ಇವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು. ಹಿಂದೆ ಕಾಂಗ್ರೆಸ್ ಶಾಸಕರು, ಸಚಿವರು ಎಲ್ಲೋ ಐಟಿ ದಾಳಿ ಆದರೆ ನಮ್ಮನೆ ಮೇಲೆ ಐಟಿ ದಾಳಿ ಆಗುತ್ತದೆ ಎಂದು ಹೇಳುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಉಪ ಚುನಾವಣೆಗೆ ಸಿದ್ಧ:
ಶಿಗ್ಗಾವಿ ಸೇರಿದಂತೆ ಉಪ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ಮಾಡಿದ್ದಾರೆ‌. ಅವರು ಅಭಿಪ್ರಾಯ ಪಡೆದು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ಯಾರೇ ಅಭ್ಯರ್ಥಿ ಮಾಡಿದರೂ ನಾವು ಮುಕ್ತವಾಗಿ ಕೆಲಸ ಮಾಡುತ್ತೇವೆ. ನನ್ನ ಮಗನನ್ನು ಅಭ್ಯರ್ಥಿ ಮಾಡುವಂತೆ ಯಾರೂ ಬಂದು ಕೇಳಿಲ್ಲ ಎಂದರು. ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬದ ವಿಚಾರವಾಗಿ, ಪಕ್ಷದಲ್ಲಿ ಸಮರ್ಥರು ಹೆಚ್ಚಿಗೆ ಇರುವುದರಿಂದ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬ ಆಗುತ್ತಿರಬಹುದು. ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಬಜೆಟ್ ನಿರೀಕ್ಷೆ
ಕೇಂದ್ರದ ಬಜೆಟ್ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರದ ಬಜೆಟ್‌ನಿಂದ ರಸ್ತೆ, ರೈಲ್ವೆ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಅನುದಾನ, ಕೃಷಿ ವಲಯಕ್ಕೆ ಹೆಚ್ಚಿನ ಅನುದಾನ ಬರುವ ನಿರೀಕ್ಷೆ ಇದೆ ಎಂದು ಇದೆ ವೇಳೆ ಹೇಳಿದರು.

TAGGED:Basavaraja Bommaicm siddaramaiahcongressValmiki Corporation Scam
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Suicide attempt by jumping onto railway tracks Loco pilot stops train and rushes to rescue in Sagar Shivamogga
Crime

ಸಾಗರ | ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆ ಯತ್ನ – ರೈಲು ನಿಲ್ಲಿಸಿ ರಕ್ಷಣೆಗೆ ಧಾವಿಸಿದ ಲೋಕೋ ಪೈಲಟ್‌

Public TV
By Public TV
13 minutes ago
Sea turtle nest
Latest

ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ

Public TV
By Public TV
28 minutes ago
JCB
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

Public TV
By Public TV
30 minutes ago
Shubam gill
Cricket

ಟಿ20 ವಿಶ್ವಕಪ್‌ಗೆ ತಂಡ ಪ್ರಕಟ – ಗಿಲ್‌ ಔಟ್‌, ಅಕ್ಷರ್‌ ಪಟೇಲ್‌ಗೆ ಉಪನಾಯಕನ ಪಟ್ಟ

Public TV
By Public TV
39 minutes ago
teacher and Hotel worker die of heart attack in Hassan
Districts

ಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ

Public TV
By Public TV
41 minutes ago
Byrati Basavaraj 1
Bengaluru City

ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?