ಶಿವಮೊಗ್ಗ: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು.
ಶಿವಮೊಗ್ಗದ ಫ್ರೀಡಂ ಪಾರ್ಕ್ (Freedom Park Shivamogga) ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಂಬಾಳೆ ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಇನ್ಮುಂದೆ ಯುವನಿಧಿ (Yuvanidhi Scheme) ಯೋಜನೆಯಡಿ ಡಿಪ್ಲೋಮಾ ವ್ಯಾಸಂಗ ಮುಗಿಸಿರುವವರಿಗೆ 1,500 ರೂ., ಪದವಿ ಮುಗಿಸಿರುವವರಿಗೆ 3 ಸಾವಿರ ರೂ. ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಲಿದೆ.
Advertisement
Advertisement
ಸರ್ಕಾರದಿಂದ ಹಣ ವರ್ಗಾವಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಸಚಿವರಾದ ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ್, ಕೆ.ಜೆ.ಜಾರ್ಜ್, ಮಂಕಾಳ ವೈದ್ಯ, ನಾಗೇಂದ್ರ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಶಾಂತನಗೌಡ, ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ, ಬಿಜೆಪಿ ಶಾಸಕ ಚನ್ನಬಸಪ್ಪ, ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ನಾನೂ ಅಯೋಧ್ಯೆಗೆ ಹೋಗುತ್ತೇನೆ: ಸಿದ್ದರಾಮಯ್ಯ
Advertisement
Advertisement
ಕಾರ್ಯಕ್ರಮದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಉತ್ತರಕನ್ನಡ ಫಲಾನುಭವಿಗಳು, ಕಾರ್ಯಕರ್ತರು ಹೀಗೆ ಸಹಸ್ರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದಾರೆ.