ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷ ಜನಬರ್ಬಾದ್ ಸಮಾವೇಶ ಮಾಡಿಲ್ಲ. ಕಾಂಗ್ರೆಸ್ ಪಕ್ಷವೇ ಬರ್ಬಾದ್ ಆಗಿ ಹೋಗಿದೆ. ಜನ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಪಕ್ಷ ತಡಕಾಡುವಂತಾಗಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಡಿಸಿಎಂ ಸಿ.ಎನ್ ಅಶ್ವತ್ಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಚುನಾವಣಾ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿದ್ದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಸಹ ಸಾಥ್ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವತ್ಥ್ ನಾರಾಯಣ್ ನಮಗೆ ಚುನಾವಣೆ ಸಂಬಂಧ ನೀತಿ ಸಂಹಿತೆ ಅಡ್ಡಿಯಾಗಿತ್ತು. ನೆರೆಪೀಡಿತ ಪ್ರದೇಶಗಳ ಪ್ರವಾಸ ಮಾಡಲು ಸಾಧ್ಯವಾಗಿಲ್ಲ. ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಅರವಿಂದ್ ಕೇಜ್ರಿವಾಲ್
Advertisement
Advertisement
ಕಾಂಗ್ರೆಸ್ ನವರು ಉಲ್ಲಂಘನೆ ಮಾಡಲು ಪ್ರಚೋದನೆ ಪ್ರೇರಪಣೆ ನೀಡಿದ್ದಾರೆ. ಆದರೆ ನಾವು ಸದಾ ಜನಸಾಮಾನ್ಯರ ಪರವಾಗಿ ಸಕ್ರಿಯವಾಗಿ ಕೆಲಸಗಳನ್ನ ಮಾಡಿಕೊಂಡು ಬರುತ್ತಿದ್ದೇವೆ. ಕಾಂಗ್ರೆಸ್‍ನವರು ಬರ್ಬಾದ್ ಆಗಿದ್ದಾರೆ. ಇನ್ನೂ ಎಂಎಲ್‍ಸಿ ಚುನಾವಣೆಯಲ್ಲಿ ಸ್ಥಳೀಯವಾಗಿ ಯಡಿಯೂರಪ್ಪನವರು ಕೆಲವು ಕಡೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಮ್ಮ ವರಿಷ್ಟರು ಪಕ್ಷದಿಂದ ಅಧಿಕೃತವಾಗಿ ಯಾವ ಹೊಂದಾಣಿಕೆ ಮಾತುಕತೆಗಳು ಆಗಿಲ್ಲ ಎಂದರು. ಇದನ್ನೂ ಓದಿ: ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್
Advertisement
Advertisement