ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದೆ.
ರಾಜ್ಯ ಸರ್ಕಾರ ಸಿ.ಎನ್.ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯವಾದ ಹಿನ್ನೆಲೆ ಮುಂದುವರಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಅವರ ಸೇವಾವಧಿ ವಿಸ್ತರಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ
Advertisement
Advertisement
ಡಾ. ಸಿ.ಎನ್.ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ ಮುಖ್ಯಮಂತ್ರಿಗಳು ಮುಂದುವರಿಸಿದ್ದಾರೆ. ತಮ್ಮ ಸೇವಾವಧಿ ವಿಸ್ತರಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಮಂಜುನಾಥ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Advertisement
Advertisement
ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್.ಮಂಜುನಾಥ್ ಅವರ ಅವಧಿ ಮುಗಿದಿತ್ತು. ಅವರನ್ನೇ ಮುಂದುವರಿಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ವ್ಯಕ್ತವಾಗಿತ್ತು. ಮಂಜುನಾಥ್ ಅವರನ್ನು ಮುಂದುವರಿಸುವಂತೆ ಅನೇಕ ಕಡೆ ಪ್ರತಿಭಟನೆಗೂ ಕರೆ ನೀಡಲಾಗಿತ್ತು. ಅಷ್ಟರಲ್ಲೇ ಎಚ್ಚೆತ್ತ ಸರ್ಕಾರ ಸೇವಾವಧಿ ವಿಸ್ತರಿಸಿದೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಸಾಲ ಮರುಪಾವತಿ ಮಾಡಲ್ಲ ಎಂದ ರೈತರು
ಡಾ.ಮಂಜುನಾಥ್ ಅವರ ಸೇವಾವಧಿ 2021ರಲ್ಲೇ ಮುಗಿದಿತ್ತು. ಆಗ ಕೋವಿಡ್ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರಕ್ಕೆ ಸಾಕಷ್ಟು ಉಪಯುಕ್ತ ಸಲಹೆಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಸೇವಾವಧಿಯನ್ನು ಆಗಲೂ ವಿಸ್ತರಿಸಲಾಗಿತ್ತು.