ರಾಯಚೂರು: ಕಲ್ಲಿದ್ದಲು (Coal) ಗಣಿ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಒದ್ದೆಯಾದ ಕಲ್ಲಿದ್ದಲು ಸರಬರಾಜಾಗುತ್ತಿದೆ. ಅಲ್ಲದೇ ತಾಂತ್ರಿಕ ಸಮಸ್ಯೆಗಳಿಂದ ರಾಯಚೂರಿನ (Raichur) ಆರ್‌ಟಿಪಿಎಸ್, ವೈಟಿಪಿಎಸ್ ಹಾಗೂ ಬಳ್ಳಾರಿಯ (Bellary) ಬಿಟಿಪಿಎಸ್ ವಿದ್ಯುತ್ ಘಟಕಗಳು ಸ್ಥಗಿತವಾಗಿವೆ ಇದರಿಂದ ವಿದ್ಯುತ್ (Power) ಉತ್ಪಾದನೆ ಇಳಿಕೆಯಾಗುವ ಸಾಧ್ಯತೆಯಿದೆ.
ಒದ್ದೆಯಾದ ಕಲ್ಲಿದ್ದಲು ವಿದ್ಯುತ್ ಉತ್ಪಾದನೆಗೆ ಬಳಕೆಯಾಗುತ್ತಿಲ್ಲ. ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದ 8 ಘಟಕಗಳಲ್ಲಿ ಐದು ಘಟಕಗಳು ಬಂದ್ ಆಗಿವೆ. ಇದರಿಂದ 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಕೇವಲ 363 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೆಯಲ್ಲಿ ಬೈಕ್, ಆಟೋ ನಿಷೇಧ – ಮೊದಲ ದಿನವೇ 137 ಕೇಸ್
Advertisement
Advertisement
ವೈಟಿಪಿಎಸ್‍ನ 2 ಘಟಕಗಳಲ್ಲಿ ಒಂದು ಘಟಕ ಬಂದ್ ಆಗಿದೆ. ಇದರಿಂದ 1600 ಮೆಗಾವ್ಯಾಟ್ ಸಾಮರ್ಥ್ಯದ ಕೇಂದ್ರದಲ್ಲಿ 348 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದೆ. ಇನ್ನೂ ಬಳ್ಳಾರಿಯ ಬಿಟಿಪಿಎಸ್‍ನ ಮೂರು ಘಟಕಗಳಲ್ಲಿ ಎರಡು ಬಂದ್ ಆಗಿದ್ದು 1700 ಮೆಗಾವ್ಯಾಟ್ ಸಾಮಥ್ರ್ಯದ ಕೇಂದ್ರದಲ್ಲಿ ಕೇವಲ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಜಲ ವಿದ್ಯುತ್ ಕೇಂದ್ರಗಳಲ್ಲೂ ನಿರೀಕ್ಷಿತ ಮಟ್ಟದಲ್ಲಿ ವಿದ್ಯುತ್ ಉತ್ಪಾದನೆಯಾಗದಿರುವ ಹಿನ್ನೆಲೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ನೇಣಿಗೆ ಶರಣು!
Advertisement
Web Stories