ರಾಯಚೂರು: ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದ್ದು, ಎರಡು ಪಕ್ಷಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಲೋಕಸಭಾ ಚುನಾವಣೆಯ ಮುನ್ನವೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು, ಮೈತ್ರಿ ಸರ್ಕಾರದ ಕಾಂಗ್ರೆಸ್ ಧೋರಣೆ ಇದೇ ರೀತಿ ಮುಂದುವರಿದರೆ ಸಿಎಂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದರಿಂದ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದು ಕರೆಯಿಸಿಕೊಳ್ಳುವ ಡಿ.ಕೆ ಶಿವಕುಮಾರ್ ಅವರಿಗೂ ಅಸಮಾಧಾನವಿದ್ದು, ಸರ್ಕಾರದ ಸಚಿವರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಹೊಂದಾಣಿಕೆ ಗೊಂದಲದಿಂದಲೇ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು.
Advertisement
Advertisement
ಇತ್ತ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಯಚೂರು ಜಿಲ್ಲೆಯ ಶಾಸಕರಾದ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಲಿಂಗಸುಗೂರು ಶಾಸಕ ಡಿ.ಎಸ್ ಹೂಲಿಗೇರಿ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರು, ಸಿಎಂ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಸಮ್ಮಿಶ್ರ ಸರ್ಕಾರ ಇರುವುದರಿಂದ ನಮ್ಮ ನಾಯಕರಿಗೂ ಸಿಎಂ ಸ್ಥಾನ ಸಿಗಬೇಕೆಂಬ ಹಂಬಲ ಕೆಲವರಿಗೆ ಇರುತ್ತೆ. ಆದರೆ ಈಗ ಸಿಎಂ ಬದಲಾಗುವ ಸಂದರ್ಭ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ ಎಂದು ಸ್ಪಷ್ಟನೆ ನೀಡಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv