ಬೆಂಗಳೂರು: ಕಾಂಗ್ರೆಸ್ಸಿಗೆ ಆಪರೇಷನ್ ಕಮಲದ ಭಯ ಕಾಡುತ್ತಿದ್ದು, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಬಳಿಕ ಮತ್ತಷ್ಟು ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ. ಆದ್ದರಿಂದ ಅಸಮಾಧಾನ ತಣಿಸಲು ಸಚಿವ ಡಿ.ಕೆ. ಶಿವಕುಮಾರ್ ಗೆ ಹೆಚ್ಚು ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದ್ದು, ಶಾಸಕರ ಮೇಲೆ ಹದ್ದಿನ ಕಣ್ಣಿಡಲು ಸೂಚನೆಯನ್ನು ಕೊಟ್ಟಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Advertisement
ಶಾಸಕರಾದ ಆನಂದ್ ಸಿಂಗ್ ಮತ್ತು ನಾಗೇಂದ್ರ ಮೇಲೆ ನಿಗಾ ಇಡಲು ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಶಾಸಕರ ಮೇಲೂ ನಿಗಾವಹಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
Advertisement
ಈ ಕಾರಣದಿಂದ ಶಿವಕುಮಾರ್ ಗೆ ರಾಮನಗರದ ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆಗೂ ಮುನ್ನ ಮುನ್ನೆಚ್ಚರಿಕೆ ಹೆಜ್ಜೆ ಇಡುತ್ತಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಭಯ ಶುರುವಾಯ್ತಾ? ಸೆಪ್ಟೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ಅಸಮಾಧಾನ ಸ್ಫೋಟ ಆಗುತ್ತಾ ಎಂಬ ಅನುಮಾನ ಮೂಡಿದೆ.