ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಎಂದು ಕೋಲಾರ ಮಾಜಿ ಸಂಸದ ಕೆಎಚ್ ಮುನಿಯಪ್ಪ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಪಕ್ಷಕ್ಕೆ ಸೋಲುಂಟಾಗಿದೆ. ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಲಿಲ್ಲ. ಪರಿಣಾಮ ಲೋಕ ಸಮರದಲ್ಲಿ ಎರಡು ಪಕ್ಷಗಳಿಗೆ ಸೋಲುಂಟಾಗಿದೆ. ರಾಜ್ಯ ಮಟ್ಟದಲ್ಲಿ ಎರಡು ಪಕ್ಷದ ನಾಯಕರು ಒಂದಾದರೂ, ತಳ ಮಟ್ಟದ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಲಿಲ್ಲ ಎಂದರು.
Advertisement
Advertisement
ಸದ್ಯಕ್ಕೆ ಸಮಿಶ್ರ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ. ಮುಂದೆ ಮೈತ್ರಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಅಲ್ಲದೇ ನಾನು ರಾಜ್ಯ ರಾಜಕೀಯಕ್ಕೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿ, ಕಾರ್ಯಕಾರಿ ಸಮಿತಿ ಸದಸ್ಯನಾಗಿರುವುದರಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಸೋನಿಯಾ ಗಾಂಧಿ ಅವರು ಪಕ್ಷದ ಜವಾಬ್ದಾರಿ ತೆಗೆದುಕೊಂಡಿರುವುದಿಂದ ಕಾಂಗ್ರೆಸ್ ದೇಶದಲ್ಲಿ ಹೊಸ ಚೈತನ್ಯ ಮೂಡಿದೆ ಎಂದರು.
Advertisement
ಇದೇ ವೇಳೆ ಕ್ಷೇತ್ರದಲ್ಲಿ ತಮ್ಮ ಸೋಲಿನ ಅಂತರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗೆಲುವಿನ ಅಂತರ ಅತ್ಯಂತ ಹೆಚ್ಚಾಗಿದ್ದು, ಇದು ಇವಿಎಂ ಮೇಲೆ ಅನುಮಾನ ಹುಟ್ಟಿಸಿದೆ. ಈ ಬಗ್ಗೆ ತನಿಖೆಯಾಗಬೇಕು ಎಂಬುವುದು ನಮ್ಮ ಒತ್ತಾಯವಾಗಿದ್ದು, ಈ ಬಗ್ಗೆ ಹೈಕಮಾಂಡ್‍ಗೂ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.