ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ (Rakesh Pal) ಅವರು ಹೃದಯಾಘಾತದಿಂದ ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್ ಪಾಲ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
#WATCH | Defence Minister Rajnath Singh and Tamil Nadu CM MK Stalin paid last respects to Indian Coast Guard chief Rakesh Pal who passed away today in Chennai after suffering a cardiac arrest. pic.twitter.com/1dgAXf32U5
— ANI (@ANI) August 18, 2024
Advertisement
ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಕೇಶ್ ಪಾಲ್ ಶನಿವಾರ ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದರು. ತಕ್ಷಣ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ (Rajiv Gandhi General Hospital) ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿನತ್ತ ಜನ – ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
Advertisement
Deeply saddened at the untimely demise of Shri Rakesh Pal, DG, Indian Coast Guard in Chennai today. He was an able and committed officer under whose leadership ICG was making big strides in strengthening India’s maritime security. My heartfelt condolences to his bereaved family.
— Rajnath Singh (@rajnathsingh) August 18, 2024
Advertisement
ಇನ್ನು ರಾಕೇಶ್ ಪಾಲ್ ಅವರ ಅಕಾಲಿಕ ಮರಣಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಕಂಬನಿ ಮಿಡಿದಿದ್ದಾರೆ. ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ‘ರಾಕೇಶ್ ಪಾಲ್ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಸಮರ್ಥ ಮತ್ತು ಬದ್ಧ ಅಧಿಕಾರಿಯಾಗಿದ್ದು, ಅವರ ನಾಯಕತ್ವದಲ್ಲಿ ICG ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲುಗಳನ್ನು ಇಡುತ್ತಿತ್ತು. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಳಿಕ ಅಂತಿಮ ದರ್ಶನವನ್ನೂ ಪಡೆದಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಟಿಕೆಟ್ ಜೆಡಿಎಸ್‌ಗೆ ಪಡೆಯುವಂತೆ ಕಾರ್ಯಕರ್ತರಿಂದ ಒತ್ತಡ – ಹೆಚ್‌ಡಿಕೆ ರಿಯಾಕ್ಷನ್ ಏನು?
Advertisement
Shocked and deeply saddened by the sudden passing of Shri Rakesh Pal, DG of the Indian Coast Guard, in Chennai. His dedicated leadership played a crucial role in advancing India’s maritime security. My thoughts and prayers are with his family during this difficult time. Om… pic.twitter.com/eWFnJSe02G
— Basavaraj S Bommai (@BSBommai) August 18, 2024
1989ರಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಸೇರಿದ್ದ ಪಾಲ್, ಜುಲೈ 2023ರಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ ಮಹಾ ನಿರ್ದೇಶಕರಾಗಿ ನೇಮಕಗೊಂಡರು. ಕಳೆದ ತಿಂಗಳಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಮ್ಮ ವಿಶೇಷ ಸೇವೆ ವಿಶಿಷ್ಟ ಸೇವಾ ಮೆಡಲ್ ಪಡೆದಿದ್ದರು. ಕೋಸ್ಟ್ ಗಾರ್ಡ್‌ನ ಮೊದಲ ಗನ್ನರ್ ಎಂಬ ಮನ್ನಣೆ ಹೊಂದಿದ್ದ ಪಾಲ್, 2013 ರಲ್ಲಿ ತತ್ರಾಕ್ಷಕ್ ಪದಕ (ಟಿಎಂ) ಮತ್ತು 2018 ರಲ್ಲಿ ಅವರ ವಿಶಿಷ್ಟ ಸೇವೆಗಾಗಿ ಅಧ್ಯಕ್ಷ ತತ್ರಾಕ್ಷಕ್ ಪದಕ (ಪಿಟಿಎಂ) ಸಹ ಪಡೆದಿದ್ದಾರೆ. ಇದನ್ನೂ ಓದಿ: Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್ ಗ್ಯಾಂಗ್ ಅರೆಸ್ಟ್