ದಾವಣಗೆರೆ: ನಡೆದಾಡುವ ದೇವರು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರದ ಮುಂಭಾಗ ನಾಗರಹಾವೊಂದು ಒಂದು ಗಂಟೆಗಳ ಕಾಲ ಕುಳಿತ ಅಚ್ಚರಿಯ ಘಟನೆ ಚನ್ನಗಿರಿ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ.
ನಾಗೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಶ್ರೀಗಳ ಭಾವಚಿತ್ರವಿಟ್ಟು ಶ್ರದ್ಧಾಂಜಲಿ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡಿದ್ದಾರೆ. ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿ ತೆರಳಿದ ಬಳಿಕ ಅಲ್ಲಿಗೆ ನಾಗರಹಾವೊಂದು ಆಗಮಿಸಿದೆ. ಇದನ್ನೂ ಓದಿ: ಅನ್ನ ಚೆಲ್ಲಲು ಬಂದ ಭಕ್ತನಿಗೆ ಮಠದ ವಿದ್ಯಾರ್ಥಿಯಿಂದ ಅನ್ನದ ಪಾಠ! – ವಿಡಿಯೋ ನೋಡಿ
Advertisement
Advertisement
ಎಲ್ಲಿಂದಲೋ ಬಂದಿದ್ದ ನಾಗರಹಾವು ಸಿದ್ದಗಂಗಾ ಶ್ರೀಗಳ ಭಾವಚಿತ್ರದ ಮುಂದೆ ಒಂದು ಗಂಟೆಗೂ ಅಧಿಕ ಕಾಲ ಕುಳಿತಿತ್ತು. ಈ ವಿಶೇಷ ದೃಶ್ಯವನ್ನು ನೋಡಿದ ಗ್ರಾಮಸ್ಥರು ಆಶ್ಚರ್ಯ ಪಟ್ಟಿದ್ದಾರೆ. ಸಾಧಾರಣವಾಗಿ ಕಾಣಿಸಿಕೊಳ್ಳದ ನಾಗರಹಾವು ಸಿದ್ದಗಂಗಾ ಶ್ರೀಗಳ ಭಾವಚಿತ್ರ ಮುಂದೆ ಕಾಣಿಸಿದ್ದನ್ನು ಕಂಡು ಜನರು ಇದೊಂದು ವಿಸ್ಮಯ ಎಂದಿದ್ದಾರೆ. ಕೇವಲ ಮನುಷ್ಯರು ಮಾತ್ರವಲ್ಲದೇ ಮೂಖ ಜೀವಿ ಕೂಡ ಸಿದ್ದಗಂಗಾ ಶ್ರೀಗಳಿಗೆ ನಮನ ಸಲ್ಲಿಸಿದೆ ಎಂದು ಬರೆದು ಭಾವಚಿತ್ರ ಮುಂದಿರುವ ನಾಗರಹಾವಿನ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv