Connect with us

Bengaluru City

ಇಂದಿರಾ ಕ್ಯಾಂಟೀನ್‍ನಲ್ಲಿ ಜಿರಲೆ ಪತ್ತೆ-ಪೊಲೀಸ್ ತನಿಖೆಗೆ ಆದೇಶ

Published

on

ಬೆಂಗಳೂರು: ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ.

ಎರಡು ದಿನಗಳ ಹಿಂದೇ ರಾಜರಾಜೇಶ್ವರಿನಗರದ ಕೊಟ್ಟಿಗೆಪಾಳ್ಯ ಇಂದಿರಾ ಕ್ಯಾಂಟೀನ್‍ನಲ್ಲಿ ಒಂದೇ ದಿನದಲ್ಲಿ ರೈಸ್‍ಬಾತ್‍ನಲ್ಲಿ ಎರಡೆರೆಡು ಜಿರಲೆ ಸಿಕ್ಕಿತ್ತು. ಇದೇ ಕಾರಣಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದು, ಈ ಬಗೆಗಿನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಆದರೆ ಇಂದಿರಾ ಕ್ಯಾಂಟೀನ್‍ನಲ್ಲಿ ಸಿಕ್ಕ ಜಿರಲೆ ಯಾರೋ ತಂದು ಹಾಕಿರುವುದು ಎಂದು ಮೇಯರ್ ಸಂಪತ್ ರಾಜ್ ಹೇಳಿಕೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಹಾಳು ಮಾಡುವ ಉದ್ದೇಶದಿಂದಲೇ ಜಿರಲೆ ರಾಮಾಯಣ ಸೃಷ್ಟಿಸಿದ್ದಾರೆ. ಈ ಕುರಿತು ತನಿಖೆಯನ್ನು ನಡೆಸಿ ಸತ್ಯಾಂಶವನ್ನು ಹೊರತರುತ್ತೇವೆ ಎಂದು ತಿಳಿಸಿದ್ದಾರೆ.

ಈ ನಡುವೆ ಜಿರಲೆ ಸಿಕ್ಕಿರುವ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ನಾಲ್ವರು ವಿರುದ್ಧ ದೂರು ದಾಖಲು ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *