ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (Cockroach Janta Party) ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಜೂನ್ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಮಿತವ್ಯಯ ಕರೆ ಎಫೆಕ್ಟ್ | ಚಿನ್ನ ಆಮದು 70% ಇಳಿಕೆ – ಬೆಂಗಳೂರಲ್ಲಿ ಆಭರಣ ವ್ಯಾಪಾರ ಕುಸಿತ
ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ, ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಜೂ.6 ರಂದು ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಸೇರುವಂತೆ ಬೆಂಬಲಿಗರಿಗೆ ತಿಳಿಸಿದ್ದಾರೆ.
Will be returning to India to demand the resignation of the Education Minister.
I request the youth of India to join this peaceful protest at Jantar Mantar and exercise our constitutional right to seek accountability from the government. https://t.co/W8oZsGmgvi
— Abhijeet Dipke (@abhijeet_dipke) June 1, 2026
ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಗ್ಗೂಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಸಮಯ ಬಂದಿದೆ. ನಾವು ಒಟ್ಟಾಗಿ ಧ್ವನಿ ಎತ್ತಿದರೆ, ಅವರು ಖಂಡಿತವಾಗಿಯೂ ನಮ್ಮ ಮಾತನ್ನು ಕೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ನಾನು ಶನಿವಾರ ಬೆಳಿಗ್ಗೆ ದೆಹಲಿಗೆ ಬರಲು ಎಂದು ನಿರ್ಧರಿಸಿದ್ದೇನೆ. ದಯವಿಟ್ಟು ವಿಮಾನ ನಿಲ್ದಾಣದಲ್ಲಿ ನನ್ನೊಂದಿಗೆ ಸೇರಿ ಮತ್ತು ನಾವು ಒಟ್ಟಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೇಳೋಣ ಎಂದಿದ್ದಾರೆ. ಇದನ್ನೂ ಓದಿ: ಸುವೇಂಧು ಸಂಪುಟ ವಿಸ್ತರಣೆ – ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ
ಪರೀಕ್ಷೆಯಲ್ಲಾದ ಲೋಪಗಳು ಮತ್ತು ವಿವಾದಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ವೀಡಿಯೋದಲ್ಲಿ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.
