– ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಅಭಿಜಿತ್ ದೀಪ್ಕೆ, ಸಾಹಿತಿ ದೇವನೂರ ಮಹಾದೇವ ಸೇರಿ ಹಲವರು ಭಾಗಿ
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ‘ಜನತಾ ನ್ಯಾಯಾಲಯ’ ಪ್ರತಿಭಟನೆಯಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದೆ. ಸಾಹಿತಿ ದೇವನೂರ ಮಹಾದೇವ, ಸಿಜೆಪಿಯ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ ಸೇರಿದಂತೆ ಕಲಾವಿದರು, ಚಿಂತಕರು ಸಹ ಪಾಲ್ಗೊಳ್ಳಲಿದ್ದಾರೆ.
ಪ್ರತಿಭಟನೆಯಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳು, ಆರ್ಥಿಕ ತಜ್ಞ ಪರಕಾಲ ಪ್ರಭಾಕರ್ ಸೇರಿ ಹಲವು ಚಿಂತಕರು, ಕಲಾವಿದರು, ಸಾಹಿತಿಗಳು ಭಾಗವಹಿಸಲಿದ್ದಾರೆ.

