ಬಿಗ್ ಬಾಸ್ ಓಟಿಟಿ ಶುರುವಾಗುವ ಮುನ್ನ ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಸದ್ದು ಮಾಡಿತ್ತು. ಹಾಗೆಯೇ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿರುವ ಕಾಫಿನಾಡು ಚಂದು ಕೂಡ ಎಂಟ್ರಿ ಕೊಡುತ್ತಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಕಾಫಿನಾಡು ಚಂದು ಎಂಟ್ರಿಗೆ, ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

View this post on Instagram
ಇನ್ನು ಈ ಬಾರಿ ಬಿಗ್ ಬಾಸ್ ಓಟಿಟಿ ಮೊದಲ ಸೀಸನ್ ಆಗಿದೆ. ಇದು ಕೇವಲ ವೂಟ್‌ನಲ್ಲಿ ಮಾತ್ರ ಲಭ್ಯವಿದೆ. ಹಾಗಾಗಿ ಪ್ರತಿಯೊಬ್ಬರಿಗೂ ನಿನ್ನೆಯ ಕಾರ್ಯಕ್ರಮ ನೋಡಲು ಸಾಧ್ಯವಾಗಿಲ್ಲ. ಬಹುತೇಕ ಜನರು ಕಾಫಿನಾಡು ಚಂದು ಒಳಗೆ ಹೋಗಿದ್ದಾರೆ ಎಂದು ತಿಳಿದುಕೊಂಡಿದ್ದರು. ಆದರೆ ಅದು ಸುಳ್ಳಾಗಿದೆ. ಹುಟ್ಟುಹಬ್ಬಕ್ಕೆ ವಿಶ್ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಅಪಾರ ಅಭಿಮಾನಿಗಳ ಮನಗೆದ್ದಿರುವ ಚಂದು ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಕ್ಯೂರಿಯಸ್ ಆಗಿದ್ದರು. ಈಗ ಅವರು ಹೋಗಿಲ್ಲ ಎಂಬ ವಿಚಾರ ತಿಳಿದು ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಿಗ್ ಬಾಸ್ ಟಿವಿ ಶೋ ಸೀಸನ್ 9ಕ್ಕೆ, ಬರಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

