Connect with us

Bengaluru City

ಕಾಲೇಜುಗಳಿಗೆ ಕಾಗ್ನಿಜೆಂಟ್‍ನಿಂದ 12 ಸಾವಿರ ಡಿಬಾಂಡೆಡ್ ಕಂಪ್ಯೂಟರ್ ಕೊಡುಗೆ

Published

on

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ‘ಹೆಲ್ಪ್ ಎಜುಕೇಟ್’ ಉಪಕ್ರಮದ ಅಡಿಯಲ್ಲಿ ವಿವಿಧ ಕಾಲೇಜುಗಳಿಗೆ ಡಿಬಾಂಡೆಡ್ ಕಂಪ್ಯೂಟರ್ ಗಳನ್ನು ಇಲಾಖೆಯ ಉನ್ನತ ಅಧಿಕಾರಿಗಳು ಇಂದು ಕಳಿಸಿಕೊಟ್ಟಿದ್ದಾರೆ.

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಕಂಪ್ಯೂಟರ್‍ ಗಳನ್ನು ಹೊತ್ತುಹೊರಟ ವಾಹನಗಳಿಗೆ ಇಲಾಖೆಯ ಆಯುಕ್ತ ಪ್ರದೀಪ್ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಪ್ರದೀಪ್ ಅವರು, “ಕಾಗ್ನಿಜೆಂಟ್ ಸಂಸ್ಥೆ ಡಿಬಾಂಡೆಡ್ 12,500 ಕಂಪ್ಯೂಟರ್ ಗಳನ್ನು ಕಾಲೇಜು ಶಿಕ್ಷಣ ಇಲಾಖೆಗೆ ನೀಡಿದ್ದಾರೆ. ಇದಕ್ಕೆ ಅಗತ್ಯವಾದ ಸಾಫ್ಟ್ ವೇರ್ ಅನ್ನು ರೋಟರಿ ಕ್ಲಬ್ ಅಪ್ ಡೇಟ್ ಮಾಡಿಕೊಡುತ್ತಿದೆ. ಈ ಕಂಪ್ಯೂಟರ್ ಗಳನ್ನು ಸರ್ಕಾರಿ ಪದವಿ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಎಲ್ಲ ಸರ್ಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜುಗಳಿಗೆ ಒಟ್ಟು 30,000 ಕಂಪ್ಯೂಟರ್ ಗಳು ಬೇಕು. ಈಗ ಕಾಗ್ನಿಜೆಂಟ್ ಕಂಪನಿ 12,500 ಕಂಪ್ಯೂಟರ್ ಗಳನ್ನು ನೀಡುತ್ತಿದೆ. ಮತ್ತೆ 8000 ಕಂಪ್ಯೂಟರ್ ಗಳನ್ನು ಕೊಡುವುದಾಗಿ ತಿಳಿಸಿದೆ. ಉಳಿದ 10,000 ಕಂಪ್ಯೂಟರ್ ಗಳನ್ನು ಬೇರೆ ಬೇರೆ ಕಂಪನಿಗಳಿಂದ ಪಡೆಯುವ ಕೆಲಸ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

ವಿದ್ಯಾರ್ಥಿಗಳಿಗೆ ನೆರವಾಗುಗುವುದರೊಂದಿಗೆ, ಅಧ್ಯಾಪಕರಿಗೆ ತರಬೇತಿ ನೀಡುವುದು, ಕಾಲೇಜುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲುವಂತಹ ಉತ್ತಮ ಕೆಲಸಕ್ಕಾಗಿ ಹೆಲ್ಪ್ ಎಜುಕೇಟ್ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ ಎಂದರು.

ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿಬಾಂಡೆಡ್ ಕಂಪ್ಯೂಟರ್‍ ಗಳನ್ನು ವಿವಿಧ ಕಾಲೇಜುಗಳಿಗೆ ರವಾನಿಸಲಾಯಿತಲ್ಲದೆ, ವಿವಿಧ ಹಂತಗಳಲ್ಲಿ ಒಟ್ಟು 12,500 ಡಿಬಾಂಡೆಡ್ ಕಂಪ್ಯೂಟರ್‍ ಗಳನ್ನು ಕಳಿಸಲಾಗುತ್ತಿದೆ. ಇಂದು ರವಾನಿಸಲ್ಪಟ್ಟ ಕಂಪ್ಯೂಟರ್‍ ಗಳನ್ನು ಬೆಂಗಳೂರು ವಲಯದ ಕಾಲೇಜುಗಳಿಗೆ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮುಖ್ಯಸ್ಥ ನಾಗೇಂದ್ರ ಪ್ರಸಾದ್, ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ (ಸಿಎಸ್‍ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Click to comment

Leave a Reply

Your email address will not be published. Required fields are marked *