ಚೆನ್ನೈ: ಫುಡ್ ಡೆಲಿವರಿ ಬಾಯ್ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.
ಮಹಿಳಾ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಶಾಲಾ ವ್ಯಾನ್ ನಿಲ್ಲಿಸಲು ಪ್ರಯತ್ನಿಸಿದ ಫುಡ್ ಡೆಲಿವರಿ ಬಾಯ್ ಮೋಹನ್ ಸುಂದರಂ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಜಾಗತಿಕ ಪರಿಸರ ಉಪಕ್ರಮ ‘ಲೈಫ್ ಮೂವ್ಮೆಂಟ್’ಗೆ ಚಾಲನೆ ನೀಡಲಿರುವ ಮೋದಿ
Advertisement
Advertisement
ಮಹಿಳೆ ಮತ್ತು ವ್ಯಕ್ತಿಯೊಬ್ಬರು ರಸ್ತೆ ದಾಟುವಾಗ ಶಾಲಾ ವ್ಯಾನ್ ಮಹಿಳೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಹಿಳೆಯೊಂದಿಗಿದ್ದವ್ಯಕ್ತಿ ವ್ಯಾನ್ ನಿಲ್ಲಿಸಲು ಯತ್ನಿಸಿದ್ದಾರೆ ಮತ್ತು ನಿಂದಿಸಿದ್ದಾರೆ. ಇದನ್ನು ಕಂಡ ಮೋಹನ್ ಸುಂದರಂ ಶಾಲಾ ವಾಹನವನ್ನು ಹಿಂಬಾಲಿಸಿ ಬೈಕ್‍ನಿಂದ ಅಡ್ಡ ಹಾಕಲು ಯತ್ನಿಸಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ – ಸ್ಟೆಷನರಿ, ಕಿರಾಣಿ ಅಂಗಡಿಗೆ ಬೆಂಕಿ
Advertisement
“This happened yesterday evening at the fun mall signal and there was a slight traffic block due to this delivery boy and all of a sudden this Cop Started beating up the Delivery person ”
. #welovecovai
.
???? IG : FB :TW @WELOVECOVAI
.#coimbatore #delivery #deliveryboy #traffic pic.twitter.com/OBEwmghc1R
— We Love Covai ❤️ (@welovecovai) June 4, 2022
Advertisement
ಈ ಗಲಾಟೆ ನೋಡಿ ಕೋಪಗೊಂಡ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೋಹನಸುಂದರಂಗೆ ಕಪಾಳಮೋಕ್ಷ ಮಾಡಿದ್ದಾರೆ. ಅದರಲ್ಲಿಯೂ ಟ್ರಾಫಿಕ್ ಪೊಲೀಸ್ ಫುಡ್ ಡೆಲಿವರಿ ಬಾಯ್‍ಗೆ ಹಲವು ಬಾರಿ ಕಪಾಳಮೋಕ್ಷ ಮಾಡಿ, ಆತನ ಕೈಯಲ್ಲಿದ್ದ ಕೀ ಮತ್ತು ಹೆಡ್‍ಸೆಟ್ ಕಿತ್ತುಕೊಳ್ಳುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಪೊಲೀಸ್ ಅಧಿಕಾರಿಯನ್ನು ನಿಯಂತ್ರಣ ಕೊಠಡಿಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.