ಮುಂದಿನ 3 ದಿನ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ – ತಾಪಮಾನ ಇನ್ನಷ್ಟು ಕುಸಿತ

Public TV
1 Min Read
Cold Weather 2

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ (Karnataka) ಹಲವು ಜಿಲ್ಲೆಗಳಿಗೆ ಶೀತಗಾಳಿಯ (Cold Wave) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ. ಇದನ್ನೂ ಓದಿ: ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

North India Cold weather 1

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ. ಇದನ್ನೂ ಓದಿ: ನಾಯಿ ಮೇಲೆ ಯುವಕನಿಂದ ಮನಸೋ ಇಚ್ಛೆ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಜಿಲ್ಲೆಗಳಲ್ಲಿ ದಾಖಲಾಗಿರುವ ಕನಿಷ್ಠ ಉಷ್ಣಾಂಶ:
ವಿಜಯಪುರ- 10.6 ಡಿ.ಸೆ
ಚಿಕ್ಕಮಗಳೂರು- 10.2 ಡಿ.ಸೆ
ಚಿಂತಾಮಣಿ- 10.8 ಡಿ.ಸೆ
ಬೀದರ್ – 11 ಡಿ.ಸೆ
ದಾವಣಗೆರೆ- 11 ಡಿ.ಸೆ
ಬೆಳಗಾವಿ ಏರ್ಪೋರ್ಟ್- 11.4 ಡಿ.ಸೆ

Share This Article