ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ಸಿಎಂ ಮನವಿ

Public TV
1 Min Read
bjp meeting2

ಬೆಂಗಳೂರು: ನಗರದ ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

bjp meeting

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರ ಜೊತೆ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು, ನಗರ ಮತ್ತು ರಾಜ್ಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಕೋವಿಡ್ ಪ್ರಮಾಣ ತೀವ್ರವಾಗಿ ಹೆಚ್ಚುವ ಸಾಧ್ಯತೆ ಇದೆ. ಇದರ ನಿಗ್ರಹಕ್ಕೆ ಜನ ಜಾಗೃತಿ, ವಾರ್ಡ್ ಮಟ್ಟದಲ್ಲಿ ವಾರ್ ರೂಂ, ಕಾಲ್ ಸೆಂಟರ್ ಮಾಡಿ ಜನರ ಸೇವೆಯಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವ್ಯಾಕ್ಸಿನ್‌ ಲಸಿಕೆ ಪಡೆದ ಮಕ್ಕಳಿಗೆ ನೋವು ನಿವಾರಕ, ಪ್ಯಾರಸಿಟಮಲ್‌ ಮಾತ್ರೆ ನೀಡಲ್ಲ: ಭಾರತ್‌ ಬಯೋಟೆಕ್‌

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಅನಪೇಕ್ಷಿತವಾದುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಸರ್ವಪ್ರಯತ್ನವೂ ನಡೆದಿದೆ. ಈ ಬಗ್ಗೆ ಕಾಂಗ್ರೆಸ್ಸಿಗರು ತಪ್ಪು ಮಾಹಿತಿ ನೀಡುತ್ತಿದ್ದು, ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದರ ಕುರಿತು ಜನರಿಗೆ ಮಾಹಿತಿ ನೀಡಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.

bjp meeting1

ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ಸಂಸದರು ಹಾಗೂ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಭಾಗವಹಿಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸ್ಫೋಟ – 4,246 ಪಾಸಿಟಿವ್, ಇಬ್ಬರು ಬಲಿ

Share This Article
Leave a Comment

Leave a Reply

Your email address will not be published. Required fields are marked *