ಧಾರವಾಡ: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾದ ಘಟನೆ ಧಾರವಾಡ ಹೊರವಲಯದ ಓಝೋನ್ ಹೋಟೆಲ್ ಬಳಿ ನಡೆದಿದೆ.
ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಬಿ ಡಿ ಜತ್ತಿ ವೈದ್ಯಕೀಯ ಕಾಲೇಜಿಗೆ ಸೇರಿದ ಬಸ್‍ನಲ್ಲಿ ಬಿಎಚ್‍ಎಂಎಸ್ ವಿದ್ಯಾರ್ಥಿಗಳು ಎಸ್‍ಡಿಎಂ ಕಾಲೇಜಿಗೆ ಪರೀಕ್ಷೆ ಬರೆಯಲು ಹೋಗುವ ವೇಳೆ ಈ ಘಟನೆ ನಡೆದಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಈ ರಸ್ತೆಯಲ್ಲಿ ಮರಳು ಚೀಲದ ಮೇಲೆ ಬಸ್ ಹತ್ತಿದ್ದರಿಂದ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬಸ್‍ನಲ್ಲಿ 20 ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದ್ದು, ವಿದ್ಯಾರ್ಥಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಆತನನ್ನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಪರೀಕ್ಷೆಗೆ ಕಳಿಸಿಕೊಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ಬಿದ್ದ ಬಸ್ ತೆರವುಗೊಳಿಸಿದರು.