ಕಲಬುರಗಿ: ಕಾಲೇಜ್ ವಿದ್ಯಾರ್ಥಿನಿಯೋರ್ವಳು ಶಹಾಬಾದ ಸಮೀಪದ ಕಾಗಿಣಾ ನದಿ ಮೇಲೆ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
Advertisement
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (21) ಹೊಸಳ್ಳಿ ಎಂದು ಗುರುತಿಸಲಾಗಿದೆ. ಭಾಗ್ಯಶ್ರೀ ಚಿತ್ತಾಪೂರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದು, ಕಲಬುರಗಿ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಮಧ್ಯಾಹ್ನ ಭಾಗ್ಯಶ್ರೀ ಸ್ಕೂಟಿಯನ್ನು ಸೇತುವೆ ಮೇಲೆ ನಿಲ್ಲಿಸಿ ಏಕಾಏಕಿ ನದಿಗೆ ಜಿಗಿದಿದ್ದಾಳೆ, ಈ ವೇಳೆ ಅಲ್ಲಿದ್ದ ಪ್ರತ್ಯಕ್ಷ ದರ್ಶಿಗಳು ಓಡಿ ಬಂದು ನೋಡುವಷ್ಟರಲ್ಲೇ ಭಾಗ್ಯಶ್ರೀ ನೀರಿನಲ್ಲಿ ಮುಳುಗಿದ್ದಳು. ಆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜೀವನಾಂಶ ಕೇಳಿದ್ದಕ್ಕೆ ಅಕ್ರಮ ಸಂಬಂಧಕ್ಕೆ ಅಡ್ಡಿ – ಪತ್ನಿಯನ್ನೆ ಬರ್ಬರವಾಗಿ ಕೊಂದ ಪತಿ
Advertisement
Advertisement
ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಶಹಾಬಾದ ನಗರ ಠಾಣೆಯ ಪೊಲೀಸರು, ಬೈಕ್ ಸಂಖ್ಯೆಯಿಂದ ನದಿಗೆ ಹಾರಿದ ಯುವತಿ ಭಾಗ್ಯಶ್ರೀ ಎಂದು ಖಚಿತ ಪಡೆಸಿದ್ದಾರೆ. ಇದೀಗ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಭಾಗ್ಯಶ್ರೀಗಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ
Advertisement
Live Tv
[brid partner=56869869 player=32851 video=960834 autoplay=true]