Monday, 16th September 2019

Recent News

ಉಡುಗೆಯಿಂದಾದ ಜಗಳ ಸಹೋದರಿಯ ಆತ್ಮಹತ್ಯೆಯಲ್ಲಿ ಅಂತ್ಯ

ಭುವನೇಶ್ವರ್: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಸಹೋದರಿಯೊಬ್ಬಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆಯೊಂದು ಒಡಿಶಾದ ಕೇಂದ್ರಪರ ಜಿಲ್ಲೆಯ ಬರೋ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಮೊನಾಲಿಸಾ ಎಂದು ಗುರುತಿಸಲಾಗಿದ್ದು, ಈಕೆ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದಳು. ಅಲ್ಲದೇ ಜೈಪುರದ ಕೈಪಾಡದಲ್ಲಿರೋ ಕಾಶಿನಾಥ್ ಮಹಾವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಮೊನಾಲಿಸಾ ಹಾಗು ಆಕೆಯ ಸಹೋದರಿ ಭಾಬಗ್ರಹಿ ಕಲಾನಿಕೇತನದಲ್ಲಿ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದರು. ಇಬ್ಬರು ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಕ್ಷಕಿಯೊಬ್ಬರ ಬಳಿ ಕಥಕ್ ಕಲಿಯಲೆಂದು ತೆರಳಿದ್ದರು. ಆ ಬಳಿಕದಿಂದ ಬಟ್ಟೆಗಾಗಿ ಇಬ್ಬರಲ್ಲೂ ಜಗಳ ಆರಂಭವಾಗಿದೆ.

ಇದೇ ವಿಚಾರದಿಂದ ಮನನೊಂದ ಮೊನಾಲಿಸಾ ಮನೆಯ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮೊನಲಿಸಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಆಕೆಯನ್ನು ಎಸ್‍ಸಿಬಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದ್ರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.

ಮೊನಾಲಿಸಾ ಡಿ. 8ರಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ್ದಳು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Leave a Reply

Your email address will not be published. Required fields are marked *