ಮುಂಬೈ: 19 ವರ್ಷದ ವಿದ್ಯಾರ್ಥಿನಿಯ ಮೇಲೆ ಆಕೆಯ ಗೆಳೆಯ ಜೊತೆಯಲ್ಲಿರುವಾಗಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ನಾಗ್ಪುರ ಜಿಲ್ಲೆಯಿಂದ ಸುಮಾರು 820 ಕಿ.ಮೀ ದೂರದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈ ಘಟನೆ ನವೆಂಬರ್ 2ರಂದು ರಾತ್ರಿ ಹೈದರಾಬಾದ್-ಜಬಲ್ಪುರ್ ಹೆದ್ದಾರಿಯಲ್ಲಿ ಹಡ್ಕೇಶ್ವರದಲ್ಲಿ ಸಂಭವಿಸಿದೆ. ಘಟನೆ ನಡೆದ ಗಂಟೆಗಳೊಳಗೆ ಆರೋಪಿ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಪ್ರಕರಣ?
ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಇಬ್ಬರು ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದು, ಕ್ಯಾಸ್‍ಮೇಟ್ ಆಗಿದ್ದರು. ಇಬ್ಬರು ಘಟನೆ ನಡೆದ ಸ್ಥಳದಲ್ಲಿ ಪೊದೆಗಳ ಹಿಂದೆ ಕೂತುಕೊಂಡಿದ್ದರು. ಈ ವೇಳೆ ಸ್ಥಳಕ್ಕೆ ಇಬ್ಬರು ವ್ಯಕ್ತಿಗಳು ಬಂದು ಹುಡುಗನ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಒಬ್ಬ ಆತನನ್ನು ರಸ್ತೆಯ ಬಳಿ ಎಳೆದುಕೊಂಡು ಹೋಗಿದ್ದಾನೆ. ಇನ್ನೊಬ್ಬ ಆರೋಪಿ ಸಂತ್ರಸ್ತೆಯನ್ನ ಪೊದೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಸ್ನೇಹಿತ ಸಹಾಯಕ್ಕಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಯಾಕೆಂದರೆ ಯಾರೊಬ್ಬರು ವಾಹನವನ್ನು ನಿಲ್ಲಿಸಿರಲಿಲ್ಲ. ಇತ್ತ ಆತನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಆದ್ದರಿಂದ ಬೇರೆಯವನ್ನು ಸಹಾಯಕ್ಕಾಗಿ ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ ಟ್ರಕ್ ಚಾಲಕನೊಬ್ಬ ವಾಹನವನ್ನು ನಿಲ್ಲಿಸಿದ್ದಾನೆ. ನಂತರ ಹತ್ತಿರದ ಡಾಬಾಗೆ ಹೋಗಿದ್ದು, ಅಲ್ಲಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ತಿಳಿಸಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಈ ಕುರಿತು ಐಪಿಸಿ ಸೆಕ್ಷನ್ ಅಡಿ ಗ್ಯಾಂಗ್‍ರೇಪ್ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಘಟನೆ ನಡೆದ ಗಂಟೆಗಳೊಳಗೆ ಅನಿಲ್ ಥೆಟೆ (46) ಮತ್ತು ಬಾಬಾ ಭಗತ್ (38) ಇಬ್ಬರನ್ನ ಆರೋಪಿಗಳೆಂದು ಶಂಕಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv