ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ (Kidnap) ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪ ಮೇಲೆ ಇದೀಗ ಸ್ಯಾಂಡಲ್‌ವುಡ್ ಖ್ಯಾತ ನಟ ದುನಿಯಾ ವಿಜಯ್ (Duniya Vijay) ಅವರ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಹಲ್ಲೆಗೊಳಗಾಗಿದ್ದ ಮನೀಶ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್, ಸಮೃದ್ದ್ ಸಿಂಹ, ವಿಶ್ವಾಸ್ ಸುಚಿ, ಸ್ಕಂದ ವೆಂಕಟೇಶ್, ಸಮೀದ್ ವಿರುದ್ಧ ಸೆಕ್ಷನ್ 115(2), 118(1), 352, 351(2), 3(5), 137(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ
ಏನಿದು ಪ್ರಕರಣ?
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮ್ರಾಟ್ ವಿಜಯ್ (Samrat Vijay) ಸೋಮವಾರ (ಆ.31)) ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅದೇ ಕಾಲೇಜಿನ ವಿದ್ಯಾರ್ಥಿ ಮನೀಶ್ ಗೌಡ (Manish Gowda) ಹಾಗೂ ಆತನ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಸಾಮ್ರಾಟ್ ಕಾರನ್ನು ಓವರ್‌ಟೇಕ್ ಮಾಡಿ ರೇಗಿಸಿದ್ದರು.

ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್, ವೆಂಕಟೇಶ್, ಸಮೀದ್ ಸೇರಿದಂತೆ ಇತರರು ಸೇರಿ ಮನೀಶ್‌ನ ಮುಖ, ಕುತ್ತಿಗೆ, ಎದೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿ, ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದರು. ಗಾಯಾಳು ಮನೀಶ್ ಗೌಡ ಕೆಂಗೇರಿ ಪೊಲೀಸ್ ಠಾಣೆಗೆ ತೆರಳಿ ಸಾಮ್ರಾಟ್ ವಿಜಯ್ ಹಾಗೂ ಆತನ ಸ್ನೇಹಿತರ ವಿರುದ್ಧ ಅಪಹರಣ ಮತ್ತು ಹಲ್ಲೆ ನಡೆಸಿದ ಆರೋಪದಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.ಇದನ್ನೂ ಓದಿ: ದುನಿಯಾ ವಿಜಯ್ ಪುತ್ರನಿಂದ ಕಾಲೇಜ್ ವಿದ್ಯಾರ್ಥಿ ಕಿಡ್ನ್ಯಾಪ್, ಹಲ್ಲೆ – ದೂರು ದಾಖಲು
