ಚಿಕ್ಕಬಳ್ಳಾಪುರ: ಹುಟ್ಟುಹಬ್ಬದ ದಿನವೇ ಅಪಘಾತಕ್ಕೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದವಳಾದ ಈಕೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಬೆಂಗಳೂರು ಕೂಲ್ ಕೂಲ್- ಇಂದು ಸಾಧಾರಣ ಮಳೆ ಸಾಧ್ಯತೆ
ಹುಟ್ಟುಹಬ್ಬದ ಹಿನ್ನೆಲೆ ನಿನ್ನೆ (ಸೋಮವಾರ) ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಕಾರು-ಆಟೋ ಡಿಕ್ಕಿ: 6 ಮಂದಿ ದುರ್ಮರಣ