ತುಮಕೂರು: ಬಸ್ ನಿಲ್ದಾಣವಿದ್ದರೂ ಅಲ್ಲಲ್ಲಿ ಸ್ಟಾಪ್ ಕೊಡಲ್ಲ. ನಿಗದಿತ ಸಮಯಕ್ಕೆ ಬಸ್‌ಗಳು ಬರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಬಸ್‌ಗಳ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ತುಮಕೂರಿನ ಹೆಬ್ಬೂರು ಹೋಬಳಿಯ ಬನ್ನಿಮರದ ಕಟ್ಟೆ ಬಳಿ ಕಾಲೇಜು ವಿದ್ಯಾರ್ಥಿಗಳು ರಸ್ತೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಸರಿಯಾದ ಸಮಯಕ್ಕೆ ಬಸ್‌ಗಳು ಬರುವುದಿಲ್ಲ, ಬಂದರೂ ನಿಲ್ದಾಣಗಳಲ್ಲಿ ಸ್ಟಾಪ್ ಕೊಡೋದಿಲ್ಲ. ಇದರಿಂದ ಶಾಲೆ-ಕಾಲೇಜಿಗೆ ಸರಿಯಾದ ಸಮಯದಲ್ಲಿ ತಲುಪಲು ಕಷ್ಟವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್
ಈ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ತಕ್ಷಣ ಪರಿಹಾರ ನೀಡಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಬಳಿಕ ಸ್ಥಳಕ್ಕೆ ಹೆಬ್ಬೂರು ಡಿಪೋ ಮ್ಯಾನೇಜರ್ ಭೇಟಿ ನೀಡಿ ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ವಿರುದ್ಧ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತ ಆಗಮಿಸಿದ ವಿದ್ಯಾರ್ಥಿಗಳು