ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

Public TV
2 Min Read
Nelamangala Student Suicide

ನೆಲಮಂಗಲ: ಇಲ್ಲಿನ ನಂದರಾಮಯ್ಯನ ಪಾಳ್ಯದಲ್ಲಿ ರ‍್ಯಾಗಿಂಗ್‌ಗೆ (Ragging) ಹೆದರಿ ಆರ್ಕಿಟೆಕ್ಚರ್ ವಿದ್ಯಾರ್ಥಿ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅರುಣ್ (22) ಆರ್ಕಿಟೆಕ್ಚರ್ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಚನ್ನಕೇಶವ ಹಾಗೂ ತುಳಸಿ ದಂಪತಿ ಹಿರಿಯ ಮಗ ಅರುಣ್ ಮೂಲತಃ ಹಾಸನದವನಾಗಿದ್ದ. ಮನೆಯಲ್ಲಿ ಕಡು ಬಡತನವಿದ್ದರಿಂದ ಕೆಲಸ ಹುಡುಕಿಕೊಂಡು ಬಂದು ನಂದರಾಮಯ್ಯನ ಪಾಳ್ಯದಲ್ಲಿ ನೆಲೆಸಿದ್ದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

ದಂಪತಿಯು ಮೂಟೆ ಹೊತ್ತು ಕೂಲಿ ಕೆಲಸ ಮಾಡಿ, ಮಕ್ಕಳನ್ನ ಸಾಕುತ್ತಿದ್ದರು. ಮನೆಯಲ್ಲಿ ಬಡತನವಿದ್ದರೂ ಅರುಣ್ ಕಲಿಕೆಯಲ್ಲಿ ಕಾಲೇಜು ಟಾಪರ್ ಆಗಿದ್ದ. ಇದರಿಂದ ಬಾಗಲೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದುಕೊಂಡಿದ್ದ. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

ಕಲೆಯಲ್ಲೂ ಆಸಕ್ತಿ ಹೊಂದಿದ್ದ ಅರುಣ್, 5 ನಿಮಿಷದಲ್ಲಿ ಭಾವಚಿತ್ರ, ವಿಭಿನ್ನ ಚಿತ್ರಗಳನ್ನ ಬಿಡಿಸುವ ಕಲೆ ರೂಢಿಸಿಕೊಂಡಿದ್ದ. ಗಣ್ಯಾತಿಗಣ್ಯರು, ಚಲನಚಿತ್ರ ನಟರ ಹಾಗೂ ಪಾರಂಪರಿ ಕಲಾಕೃತಿ ಚಿತ್ರಗಳನ್ನೂ ಬಿಡಿಸುತ್ತಿದ್ದ. ಅಲ್ಲದೇ ಸಿನಿಮಾ ತಾರೆಯರ ಭಾವಚಿತ್ರ ಬಿಡಿಸಿ ಮೆಚ್ಚುಗೆಯನ್ನೂ ಗಳಿಸಿದ್ದ. ಪೇಂಟಿಂಗ್‌ನಲ್ಲಿ ಅಪಾರ ಜನಪ್ರಿಯತೆ ಹೊಂದಿದ್ದ ಅರುಣ್, ಶಾಲಾ ಕಾರ್ಯಕ್ರಮವೊಂದರಲ್ಲಿ ಜವಹರಲಾಲ್ ಫೋಟೋ ಬಿಡಿಸಿ ಭೇಷ್ ಎನಿಸಿಕೊಂಡಿದ್ದ. ಇದನ್ನೂ ಓದಿ: ಒಡಿಶಾ ಹೋಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ – ಕಾಂಗ್ರೆಸ್ ಸ್ಟೂಡೆಂಟ್ ಲೀಡರ್ ಅರೆಸ್ಟ್

ಜು. 11ರಂದು ತಂದೆ, ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಸೆಲ್ಫಿ ವೀಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ. ನನ್ನ ಬೆನ್ನ ಹಿಂದೆ ಕೆಟ್ಟ ಕೆಟ್ಟದಾಗಿ ಮಾತನಾಡ್ತಾರೆ ಎಂದು ವೀಡಿಯೋದಲ್ಲಿ ಹೇಳಿದ್ದ. ಬಳಿಕ ಆ ವೀಡಿಯೋವನ್ನು ಕಾಲೇಜು ಗ್ರೂಪ್‌ಗೆ ಹರಿಬಿಟ್ಟು, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದ.

ವೀಡಿಯೋ ವೈರಲ್ ಆಗ್ತಿದ್ದಂತೆ ಕಾಲೇಜಿನವರು ಅರುಣ್ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೋಷಕರು ಮನೆಗೆ ಬಂದು ನೋಡಿದಾಗ ಅರುಣ್ ನೇಣಿಗೆ ಶರಣಾಗಿರುವುದು ಬೆಳಕಿಗೆಬಂದಿದೆ. ಈ ಘಟನಾ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article