– ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಶಿಫಾರಸು
ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ (Nilay Vipinchandra Anjaria), ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ (Supreme Court judges) ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ನ್ಯಾಯಲಯದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಹೆಸರುಗಳನ್ನು ಚರ್ಚಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಐವರು ಸದಸ್ಯರ ಕೊಲಿಜಿಯಂ ಸಭೆ ಸೇರಿ ಈ ಮೂರು ಹೆಸರುಗಳನ್ನು ಅಂತಿಮಗೊಳಿಸಿದೆ. ಇದನ್ನೂ ಓದಿ: ಮಂಡ್ಯ | ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಎಸ್ ಓಕಾ ಅವರ ನಿವೃತ್ತಿಯ ನಂತರ ಮೂರು ಹುದ್ದೆಗಳು ಖಾಲಿಯಾಗಿವೆ. 34 ನ್ಯಾಯಧೀಶರ ಬಲ ಹೊಂದಿರುವ ಸುಪ್ರೀಂ ಕೋರ್ಟ್ ನಲ್ಲಿ ಸದ್ಯ 31 ನ್ಯಾಯಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ