ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ(Colombia) ನಡೆದಿದೆ.
ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ (Peru) ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ತಿಳಿಸಿದ್ದಾರೆ.
Atención: Un avión Hércules de la @FuerzaAereaCol se accidentó saliendo de La Tagua, Putumayo. 110 soldados iban a bordo. Ya han sido rescatados 20 militares heridos. Situación en desarrollo. Vía @BluRadioCo pic.twitter.com/Jgb4tw74aP
— Ricardo Ospina (@ricarospina) March 23, 2026
ನಗರ ಕೇಂದ್ರದಿಂದ ಕೇವಲ 3 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಸ್ಥಳಾಂತರಿಸಲು ಪ್ರಯತ್ನಗಳು ನಡೆಯುತ್ತಿವೆ. ಅಧಿಕಾರಿಗಳು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

