ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ ಶಾಕ್‌ಗೆ ಬೆದರಿದ ಕೊಲಂಬಿಯಾ (Columbia) ತನ್ನ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ವಿಮಾನ (Plane) ಕಳುಹಿಸುವುದಾಗಿ ಹೇಳಿದೆ.
ಅಕ್ರಮ ವಲಸಿಗರನ್ನು ಹೊರದಬ್ಬುವ ಭಾಗವಾಗಿ ಅಮೆರಿಕ ಕೊಲಂಬಿಯಾ ಪ್ರಜೆಗಳನ್ನು ಗಡಿಪಾರು ಮಾಡಲು ಮುಂದಾಗಿತ್ತು. ಅಮೆರಿಕದ ನಿರ್ಧಾರಕ್ಕೆ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ (Gustavo Petro) ಆಕ್ಷೇಪ ವ್ಯಕ್ತಪಡಿಸಿದ್ದರು.
Advertisement
I was just informed that two repatriation flights from the United States, with a large number of Illegal Criminals, were not allowed to land in Colombia. This order was given by Colombia’s Socialist President Gustavo Petro, who is already very unpopular amongst his people.…
— Donald J. Trump Posts From His Truth Social (@TrumpDailyPosts) January 26, 2025
Advertisement
ಕೊಲಂಬಿಯಾದ ಪ್ರಜೆಗಳನ್ನು ಹೊತ್ತುಕೊಂಡು ಬರುವ ಅಮೆರಿಕ ವಾಯುಪಡೆಯ ಎರಡು ವಿಮಾನಗಳ ಲ್ಯಾಂಡಿಂಗ್ ಅನುಮತಿ ನೀಡುವುದಿಲ್ಲ ಎಂದು ಗುಸ್ಟಾವೊ ಪೆಟ್ರೋ ಘೋಷಣೆ ಮಾಡಿದ್ದರು.
Advertisement
ಪೆಟ್ರೋ ನಿರ್ಧಾರದಿಂದ ಕೆಂಡಾಮಂಡಲವಾದ ಡೊನಾಲ್ಡ್ ಟ್ರಂಪ್ ತನ್ನ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳದ್ದಕ್ಕೆ ಕೊಲಂಬಿಯಾ ಮೇಲೆ ತುರ್ತು 25 ಪ್ರತಿಶತ ಪ್ರತೀಕಾರದ ಸುಂಕ ವಿಧಿಸುವುದಾಗಿ ದಿಢೀರ್ ನಿರ್ಧಾರ ತೆಗೆದುಕೊಂಡರು. ಇದನ್ನೂ ಓದಿ: ನಾಲ್ವರು ಇಸ್ರೇಲ್ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದ ಹಮಾಸ್ ಉಗ್ರರು
Advertisement
Trump, a mi no me gusta mucho viajar a los EEUU, es un poco aburridor, pero confieso que hay cosas meritorias, me gusta ir a los barrios negros de Washington, allí ví una lucha entera en la capital de los EEUU entre negros y latinos con barricadas, que me pareció una pendejada,…
— Gustavo Petro (@petrogustavo) January 26, 2025
ಒಂದು ವಾರದ ಬಳಿಕ ಸುಂಕ ಪ್ರಮಾಣವನ್ನು 50% ಏರಿಕೆ ಮಾಡಲಾಗುವುದು. ಕೊಲಂಬಿಯಾದ ಸರ್ಕಾರಿ ಅಧಿಕಾರಿಗಳು ಮತ್ತು ಎಲ್ಲಾ ಮಿತ್ರರಾಷ್ಟ್ರಗಳು ಮತ್ತು ಬೆಂಬಲಿಗರ ಮೇಲೆ ಪ್ರಯಾಣ ನಿಷೇಧ ಮತ್ತು ತಕ್ಷಣದಿಂದಲೇ ವೀಸಾ ರದ್ದು ಮಾಡಲಾಗುವುದು. ಕೊಲಂಬಿಯಾದ ಸರ್ಕಾರದ ಎಲ್ಲಾ ಪಕ್ಷದ ಸದಸ್ಯರು, ಕುಟುಂಬ ಸದಸ್ಯರು ಮತ್ತು ಬೆಂಬಲಿಗರ ವೀಸಾ ನಿರ್ಬಂಧಿಸುತ್ತೇವೆ. ಬ್ಯಾಂಕಿಂಗ್ ಮತ್ತು ಹಣಕಾಸು ನಿರ್ಬಂಧಗಳನ್ನು ಸಂಪೂರ್ಣವಾಗಿ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಟ್ರಂಪ್ ನೀಡಿದ ಶಾಕ್‌ಗೆ ಕಕ್ಕಾಬಿಕ್ಕಿಯಾದ ಪೆಟ್ರೋ ಗಡಿಪಾರಾದ ಕೊಲಂಬಿಯಾದ ಪ್ರಜೆಗಳನ್ನು ಗೌರವಯುತವಾಗಿ ವಾಪಸ್ ಕರೆಸಿಕೊಳ್ಳಲು ನಾವೇ ವಿಮಾನವನ್ನು ವ್ಯವಸ್ಥೆ ಮಾಡುವುದಾಗಿ ಈಗ ಹೇಳಿದ್ದಾರೆ.
ಕೊಲಂಬಿಯಾದ ನಿರ್ಧಾರದ ನಂತರ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಹೇಳಿಕೆ ಬಿಡುಗಡೆ ಮಾಡಿ ಕೊಲಂಬಿಯಾದ ಮೇಲೆ ನಿರ್ಬಂಧ ಮತ್ತು ಸುಂಕಗಳನ್ನು ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ.