`ದಿ ಗ್ರೇಟ್ ಇಂಡಿಯನ್ ಲಾಪ್ಟರ್ ಚಾಲೆಂಜ್’ ಖ್ಯಾತಿಯ ಹಾಸ್ಯ ನಟ ರಾಜು ಶ್ರೀವಾಸ್ತವ್‌ಗೆ ಹೃದಯಾಘಾತವಾದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಅವರ ಸದ್ಯದ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.
ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ಜನಪ್ರಿಯ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಮ್‌ನಲ್ಲಿ ಅವರು ಕಸರತ್ತು ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಟ ರಾಜು ಅವರನ್ನು ಇರಿಸಲಾಗಿತ್ತಿದ್ದು, ಸದ್ಯ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಡಾ. ನಿತೀಶ್ ನಾಯ್ಕ್ ನೇತೃತ್ವದಲ್ಲಿ ರಾಜು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ- ಸ್ಪೂರ್ತಿ ಗೌಡ ಲವ್ವಿ ಡವ್ವಿ



